ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಮೆಸ್ಕಾಂ ಲೈನ್‌ಮ್ಯಾನ್ ಮೃತಪಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಮೂಲದ, ಮೆಸ್ಕಾಂನ ಹಾರನಹಳ್ಳಿ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಿರುಮಲೇಶ್ ರೆಡ್ಡಿ (30) ಮೃತ ದುರ್ದೈವಿ.
ಮೈಸವಳ್ಳಿ ಹಾಗೂ ವೀರಣ್ಣನಬೆನವಳ್ಳಿ ಗ್ರಾಮಗಳಲ್ಲಿ ವಿದ್ಯುತ್ ದುರಸ್ತಿ ಕಾರ್ಯ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ, ಮುಂಜಾನೆ ಸುಮಾರು 2 ಗಂಟೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡ ತಿರುಮಲೇಶ್ ರೆಡ್ಡಿ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಎಸಗಿದ ವಾಹನದ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
