Saturday, November 28, 2026
Saturday, November 28, 2026

Sahachetana Natyaalaya ಮೊದಲ ಅಂತಾರಾಷ್ಟ್ರೀಯ ನೃತ್ಯಪ್ರದರ್ಶನ: ಕಲಾರಸಿಕರ ಮನಸೂರೆಗೈದ ಸಹಚೇತನ ನಾಟ್ಯಾಲಯ

Date:

ದುಬೈನಲ್ಲಿ ನಡೆದ ಗಲ್ಫ್ ರಾಷ್ಟ್ರಗಳ ಅತಿದೊಡ್ಡ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾದ ‘ದುಬೈ ಕರ್ನಾಟಕ ರಾಜ್ಯೋತ್ಸವ-2026’ರ ವೇದಿಕೆಯಲ್ಲಿ ಶಿವಮೊಗ್ಗದ ಸಹಚೇತನ ನಾಟ್ಯಾಲಯದ ಕಲಾವಿದರು ಕನ್ನಡದ ಕಲಾ ವೈಭವವನ್ನು ಅನಾವರಣಗೊಳಿಸಿದ್ದಾರೆ.

ನವೆಂಬರ್ 22ರಂದು ದುಬೈನ ಕುಸೈಸ್‌ನ ನ್ಯೂ ಡಾನ್ ಪ್ರೈವೇಟ್ ಸ್ಕೂಲ್ ಆಡಿಟೋರಿಯಂನಲ್ಲಿ ಕರ್ನಾಟಕ ಸಂಘ ದುಬೈ ಹಾಗೂ ಕನ್ನಡಿಗರ ಕೂಟ ದುಬೈ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದುಷಿ ಸಹನಾ ಚೇತನ್ ನೇತೃತ್ವದ ತಂಡ ನೃತ್ಯ ಪ್ರದರ್ಶನ ನೀಡಿತು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಪ್ರೈಮ್ ಟೈಮ್‌ನಲ್ಲಿ ದುಬೈ ಕರ್ನಾಟಕ ರಾಜ್ಯೋತ್ಸವದ ಧ್ಯೇಯ ಗೀತೆಗೆ ತಂಡದ ಕಲಾವಿದರು ಲಯಬದ್ಧ ನೃತ್ಯ ಪ್ರದರ್ಶಿಸಿದರು. ಸುಮಾರು 4,000ಕ್ಕೂ ಅಧಿಕ ಪ್ರೇಕ್ಷಕರ ಸಮ್ಮುಖದಲ್ಲಿ ಮೂಡಿಬಂದ ಭಾವಪೂರ್ಣ ನೃತ್ಯ ಸಂಯೋಜನೆ ಹಾಗೂ ಕಲಾವಿದರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.

Sahachetana Natyaalaya ಸಹಚೇತನ ನಾಟ್ಯಾಲಯಕ್ಕೆ ಇದು ಮೊದಲ ಅಂತಾರಾಷ್ಟ್ರೀಯ ನೃತ್ಯ ಪ್ರದರ್ಶನವಾಗಿದ್ದು, ಪ್ರತಿಷ್ಠಿತ ವೇದಿಕೆಯಲ್ಲಿ ಪ್ರದರ್ಶನ ನೀಡುವ ಅವಕಾಶ ತಂಡಕ್ಕೆ ಲಭಿಸಿದೆ. ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ನಡೆದ ಕಾರ್ಯಕ್ರಮದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸಚಿವ ಕೆ.ಎಸ್. ಬಸವಂತಪ್ಪ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಸೇರಿದಂತೆ ಉದ್ಯಮಿಗಳು, ಗಣ್ಯರು ಹಾಗೂ ಕನ್ನಡ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.

ಸಹಚೇತನ ನಾಟ್ಯಾಲಯದ ಈ ಸಾಧನೆಗೆ ವಿದುಷಿ ಸಹನಾ ಚೇತನ್ ಹಾಗೂ ತಂಡದ ಕಲಾವಿದರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.
ಕನ್ನಡದ ಕಲೆ ಮತ್ತು ಸಂಸ್ಕೃತಿಯನ್ನು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪ್ರತಿನಿಧಿಸಲು ಅವಕಾಶ ಕಲ್ಪಿಸಿದ ಆಯೋಜಕರಿಗೆ ತಂಡ ಕೃತಜ್ಞತೆ ಸಲ್ಲಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಆಹಾರ ತಯಾರಿಕೆ: ಸಂಸ್ಕರಣೆ ಮತ್ತು ವಿತರಣೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಅಳವಡಿಕೆ ಕಡ್ಡಾಯ- ಡಾ.ಎಚ್.ಪಿ.ಎಸ್.ಮೈತ್ರಿ

Rotary Club Shivamogga ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರದಿಂದ...

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ...

U. T. Khader ಆಶಾ ಕಾರ್ಯಕರ್ತೆಯರ ನ್ಯಾಯಬದ್ಧ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ- ಆರೋಗ್ಯ ಸಚಿವ ಯು.ಟಿ.ಖಾದರ್

U. T. Khader ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ವೇತನ ಹೆಚ್ಚಳದ...