Saturday, November 28, 2026
Saturday, November 28, 2026

ಜೈನಸಮುದಾಯಗಳ ಅಭಿವೃದ್ಧಿ ನಿಗಮವನ್ನ ಪ್ರತ್ಯೇಕವಾಗಿ ಸ್ಥಾಪಿಸಿ- ಎಸ್.ಎನ್.ಚನ್ನಬಸಪ್ಪ.

Date:

ರಾಜ್ಯದಲ್ಲಿ ಪ್ರತ್ಯೇಕ ‘ಜೈನ ಸಮುದಾಯಗಳ ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸುವಂತೆ ಹಾಗೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ, ಅಲ್ಪಸಂಖ್ಯಾತ ಸಮುದಾಯಗಳ ಶೈಕ್ಷಣಿಕ ಮತ್ತು ಮೂಲಭೂತ ಸೌಕರ್ಯಗಳ ಬೇಡಿಕೆಗಳನ್ನು ಈಡೇರಿಸುವಂತೆ ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಶ್ರೀ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿ ಸರ್ಕಾರದ ಗಮನ ಸೆಳೆದಿದ್ದಾರೆ.

ಈ ಕುರಿತು ಶಾಸಕರ ಕಾರ್ಯಾಲಯದಿಂದ ಹೊರಡಿಸಲಾಗಿರುವ ಪತ್ರಿಕಾ ಪ್ರಕಟಣೆಯಲ್ಲಿ ಸಲ್ಲಿಸಲಾದ ಪ್ರಮುಖ ಬೇಡಿಕೆಗಳ ಸಮಗ್ರ ವಿವರಗಳನ್ನು ನೀಡಲಾಗಿದೆ:

  1. ಪ್ರತ್ಯೇಕ ‘ಜೈನ ಸಮುದಾಯಗಳ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಆಗ್ರಹ: ರಾಜ್ಯದಲ್ಲಿ 20 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಜೈನ ಸಮುದಾಯದ ಆರ್ಥಿಕ ಮತ್ತು ಶೈಕ್ಷಣಿಕ ಪ್ರಗತಿಗಾಗಿ, ವಿದ್ಯಾರ್ಥಿವೇತನ, ಸಾಲ-ಸಹಾಯಧನ, ತೀರ್ಥಯಾತ್ರೆ ಬೆಂಬಲ ಹಾಗೂ ಸನ್ಯಾಸಿಗಳ ಸುರಕ್ಷತೆಗಾಗಿ ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮಾದರಿಯಲ್ಲಿ ರಾಜ್ಯದಲ್ಲಿ ಪ್ರತ್ಯೇಕ ‘ಜೈನ ಸಮುದಾಯಗಳ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕೆಂದು ಆಗ್ರಹಿಸಲಾಗಿದೆ.
  2. ಅಲ್ಪಸಂಖ್ಯಾತ ಕಾಲೋನಿಗಳ ರಸ್ತೆ-ಚರಂಡಿ ಅಭಿವೃದ್ಧಿಗೆ ₹8 ಕೋಟಿ ಹಾಗೂ ಶಾಲೆ-ಅಂಗನವಾಡಿಗಳಿಗೆ ₹2 ಕೋಟಿ ಬೇಡಿಕೆ:
  • a. ರಸ್ತೆ ಮತ್ತು ಚರಂಡಿ ಕಾಮಗಾರಿಗಳು (₹8 ಕೋಟಿ): ಮಳೆಗಾಲದಲ್ಲಿ ಕೊಳಚೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶಾಂತಿನಗರ-ರಾಗಿಗುಡ್ಡ, ತುಂಗಾನಗರ ಮತ್ತು ಮೇಲಿನ ತುಂಗಾನಗರ, ಸೋಮಿನಕೊಪ್ಪ, ಬೊಮ್ಮನಕಟ್ಟೆ ಆಶ್ರಯ ಬಡಾವಣೆ, ಎಂ.ಕೆ.ಕೆ. ರಸ್ತೆ ಒಳಭಾಗ ಮತ್ತು ಖಾಜಿ ಮೊಹಲ್ಲಾ, ಸಿದ್ದೇಶ್ವರ ನಗರ-ಚಿಕ್ಕಲ್, ಅಣ್ಣಾನಗರ-ಅಶೋಕನಗರ, ಆರ್.ಎಂ.ಎಲ್. ನಗರ ಹಾಗೂ ಮದಾರಿ ಪಾಳ್ಯ-ವಾದಿ-ಎ-ಹುದಾ ಬಡಾವಣೆಗಳಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗಾಗಿ ಒಟ್ಟು ₹8 ಕೋಟಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ.
  • b. ಶಾಲೆ ಮತ್ತು ಅಂಗನವಾಡಿ ಅಭಿವೃದ್ಧಿ (₹2 ಕೋಟಿ): ಅಲ್ಪಸಂಖ್ಯಾತ ಜನಾಂಗದವರು ಹೆಚ್ಚಿನ ಪ್ರಮಾಣದಲ್ಲಿ ವಾಸಿಸುತ್ತಿರುವ ಪ್ರದೇಶಗಳ ಅಂಗನವಾಡಿ ಮತ್ತು ಶಾಲೆಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ವಿಶೇಷ ಅನುದಾನ ಕೋರಲಾಗಿದೆ. ಶಾಂತಿನಗರ, ಟ್ಯಾಂಕ್ ಮೊಹಲ್ಲಾ, ಬಾಪೂಜಿನಗರ, ಪೆನ್ಷನ್ ಮೊಹಲ್ಲಾ, ಇಂದಿರಾ ಬಡಾವಣೆ, ಶೇಷಾದ್ರಿಪುರಂ, ತುಂಗಾನಗರ, ಸೋಮಿನಕೊಪ್ಪ ಭಾಗದ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ₹1 ಕೋಟಿ ಹಾಗೂ ಮಿಳಘಟ್ಟ, ದೊಡ್ಡಪೇಟೆ, ಮಾರ್ನಮಿಬೈಲು, ಜೋಸೆಫ್ ನಗರ, ಸವಾರ್ ಲೈನ್ ರಸ್ತೆ, ಟಿಪ್ಪುನಗರ, ಆರ್.ಎಂ.ಎಲ್. ನಗರ, ಬೊಮ್ಮನಕಟ್ಟೆ ಸೇರಿದಂತೆ ವಿವಿಧೆಡೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ಕೊಠಡಿ ದುರಸ್ತಿ, ಶೌಚಾಲಯ, ಕುಡಿಯುವ ನೀರು ಹಾಗೂ ಮೂಲಸೌಕರ್ಯಕ್ಕಾಗಿ ₹1 ಕೋಟಿ ಸೇರಿ ಒಟ್ಟು ₹2 ಕೋಟಿ ಅನುದಾನಕ್ಕೆ ಮನವಿ ಸಲ್ಲಿಸಲಾಗಿದೆ.
  1. ಶಿವಮೊಗ್ಗದಲ್ಲಿ ಅಲ್ಪಸಂಖ್ಯಾತ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ ಮಂಜೂರಾತಿ: ಶಿವಮೊಗ್ಗ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿರುವುದರಿಂದ ಇಲ್ಲಿಗೆ ಬರುವ ಮುಸ್ಲಿಂ ಮತ್ತು ಜೈನ ಸಮುದಾಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸ್ಥಳಾವಕಾಶದ ತೀವ್ರ ಕೊರತೆ ಎದುರಾಗಿದೆ. ಆದ್ದರಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಶಿವಮೊಗ್ಗ ನಗರದಲ್ಲಿ ಒಂದು ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ಬಾಲಕರ ಹಾಸ್ಟೆಲ್ ಹಾಗೂ ಒಂದು ಅಲ್ಪಸಂಖ್ಯಾತರ ಬಾಲಕಿಯರ ಹಾಸ್ಟೆಲ್ ಮಂಜೂರು ಮಾಡುವಂತೆ ಶಾಸಕರು ಸಚಿವರಲ್ಲಿ ಒತ್ತಾಯಿಸಿದ್ದಾರೆ.

ಸಚಿವರು ಈ ಎಲ್ಲಾ ಜನಪರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಶಿವಮೊಗ್ಗ ನಗರದ ಅಭಿವೃದ್ಧಿ ಹಾಗೂ ಬಡ-ಮಧ್ಯಮ ವರ್ಗದ ಜನರ ಶೈಕ್ಷಣಿಕ ಮತ್ತು ಮೂಲಸೌಕರ್ಯ ಹಿತರಕ್ಷಣೆಗೆ ತಕ್ಷಣವೇ ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sahachetana Natyaalaya ಮೊದಲ ಅಂತಾರಾಷ್ಟ್ರೀಯ ನೃತ್ಯಪ್ರದರ್ಶನ: ಕಲಾರಸಿಕರ ಮನಸೂರೆಗೈದ ಸಹಚೇತನ ನಾಟ್ಯಾಲಯ

ದುಬೈನಲ್ಲಿ ನಡೆದ ಗಲ್ಫ್ ರಾಷ್ಟ್ರಗಳ ಅತಿದೊಡ್ಡ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾದ 'ದುಬೈ...

ಆಹಾರ ತಯಾರಿಕೆ: ಸಂಸ್ಕರಣೆ ಮತ್ತು ವಿತರಣೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಅಳವಡಿಕೆ ಕಡ್ಡಾಯ- ಡಾ.ಎಚ್.ಪಿ.ಎಸ್.ಮೈತ್ರಿ

Rotary Club Shivamogga ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರದಿಂದ...

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ...