ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ರೈತರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಬಾರಿ ಮೂವರು ಸಾಧಕ ರೈತರಿಗೆ ತಲಾ 1 ಲಕ್ಷ ರೂ. ನಗದು ಬಹುಮಾನದ ರೈತ ಪೀಠ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.
ಕಳೆದ ವರ್ಷ 200ಕ್ಕೂ ಹೆಚ್ಚು ಭತ್ತದ ತಳಿಗಳನ್ನು ಸಂರಕ್ಷಿಸಿರುವ ಮಿತ್ತಬಾಗಿಲು ದೇವರಾಯ ಅವರಿಗೆ 1 ಲಕ್ಷ ರೂ. ನಗದು ಬಹುಮಾನದ ರೈತ ಪೀಠ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ರೈತರಿಗೆ ಸೂಕ್ತ ಗೌರವ ಮತ್ತು ಪ್ರೋತ್ಸಾಹ ನೀಡುವ ಮೂಲಕ ಯುವ ಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸುವುದು ಪ್ರಶಸ್ತಿಯ ಉದ್ದೇಶವಾಗಿದೆ.
ಈ ಬಾರಿ ಪ್ರಶಸ್ತಿಗಾಗಿ ಆಸಕ್ತ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಜೊತೆಗೆ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ರೈತರನ್ನು ಸಾರ್ವಜನಿಕರು ನಾಮನಿರ್ದೇಶನ ಮಾಡಬಹುದು ಎಂದು ರೈತ ಪೀಠ ಪ್ರಶಸ್ತಿ ಅಧ್ಯಕ್ಷ ಹಾಗೂ ಎಸ್ಕೆಎಫ್ ಎಲಿಕ್ಸರ್ ಮುಖ್ಯಸ್ಥ ಡಾ. ಜಿ. ರಾಮಕೃಷ್ಣ ಆಚಾರ್ ಮನವಿ ಮಾಡಿದ್ದಾರೆ.
ಆಸಕ್ತರು https://gaudhama.com/application-form/ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9164561789 ಅಥವಾ 9606429200 ಸಂಪರ್ಕಿಸುವಂತೆ ತಿಳಿಸಿದ್ದಾರೆ.
