Sunday, November 29, 2026
Sunday, November 29, 2026

ಚಿತ್ರನಟಿ ತ್ರಿಷಾ ಕೃಷ್ಣನ್ ತೀರ್ಥಹಳ್ಳಿ ಭೇಟಿ: ಸಿನಿ ಅಭಿಮಾನಿಗಳಲ್ಲಿ ಕೆರಳಿದ ಕುತೂಹಲ

Date:

ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಆಗಮಿಸಿದ್ದು, ಮಲೆನಾಡಿನಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧತೆ ನಡೆದಿದೆ ಎನ್ನಲಾಗಿದೆ.

ಚಿತ್ರೀಕರಣದ ಹಿನ್ನೆಲೆಯಲ್ಲಿ ತೀರ್ಥಹಳ್ಳಿಗೆ ಬಂದಿರುವ ನಟಿ ತ್ರಿಷಾ, ಸ್ಥಳೀಯ ತೀರ್ಥರಾಮೇಶ್ವರ ಹೋಟೆಲ್‌ನಲ್ಲಿ ತಂಗಿದ್ದಾರೆ. ನೆಚ್ಚಿನ ನಟಿ ಮಲೆನಾಡಿಗೆ ಆಗಮಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಸ್ಥಳೀಯರಲ್ಲಿ ಸಂಭ್ರಮ ಮನೆಮಾಡಿದೆ.

ಇನ್ನು ಹೋಟೆಲ್‌ನ ಲಿಫ್ಟ್‌ನಲ್ಲಿ ನಟಿ ತೆರಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ತ್ರಿಷಾ ಯಾವ ಸಿನಿಮಾದ ಚಿತ್ರೀಕರಣಕ್ಕಾಗಿ ಆಗಮಿಸಿದ್ದಾರೆ ಹಾಗೂ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಅವರ ಹೊಸ ಸಿನಿಮಾ ಪ್ರಾಜೆಕ್ಟ್ ಸದ್ಯ ಕುತೂಹಲ ಮೂಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sahachetana Natyaalaya ಮೊದಲ ಅಂತಾರಾಷ್ಟ್ರೀಯ ನೃತ್ಯಪ್ರದರ್ಶನ: ಕಲಾರಸಿಕರ ಮನಸೂರೆಗೈದ ಸಹಚೇತನ ನಾಟ್ಯಾಲಯ

ದುಬೈನಲ್ಲಿ ನಡೆದ ಗಲ್ಫ್ ರಾಷ್ಟ್ರಗಳ ಅತಿದೊಡ್ಡ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾದ 'ದುಬೈ...

ಆಹಾರ ತಯಾರಿಕೆ: ಸಂಸ್ಕರಣೆ ಮತ್ತು ವಿತರಣೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಅಳವಡಿಕೆ ಕಡ್ಡಾಯ- ಡಾ.ಎಚ್.ಪಿ.ಎಸ್.ಮೈತ್ರಿ

Rotary Club Shivamogga ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರದಿಂದ...

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ...