Sunday, November 29, 2026
Sunday, November 29, 2026

ಮಂಗನ ಕಾಯಿಲೆ ಚಿಕಿತ್ಸೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ೧೦ ಹಾಸಿಗೆಗಳ ವಾರ್ಡ್- ಯು.ಟಿ.ಖಾದರ್

Date:

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಹರಡುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ತಲಾ 10 ಹಾಸಿಗೆಗಳ ವಿಶೇಷ ವಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದರು.

ಶಿವಮೊಗ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೆಎಫ್‌ಡಿ ಹಾಟ್‌ಸ್ಪಾರ್ಟ್ ಗಳನ್ನು ಗುರುತಿಸಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅರಣ್ಯ, ಅಡಿಕೆ ತೋಟ ಹಾಗೂ ಕೃಷಿ ಪ್ರದೇಶಗಳಿಗೆ ತೆರಳುವವರು ಉಣ್ಣೆಗಳಿಂದ ರಕ್ಷಣೆ ಪಡೆಯಬೇಕು. ಕೆಲಸ ಮುಗಿದ ಬಳಿಕ ಬಿಸಿನೀರಿನಲ್ಲಿ ಸ್ನಾನ ಮಾಡಬೇಕು. ಗ್ರಾಮಗಳಲ್ಲಿ ಮಂಗಗಳು ಮೃತಪಟ್ಟಿರುವುದು ಕಂಡುಬಂದರೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.

ಕೆಎಫ್‌ಡಿ ಲಕ್ಷಣಗಳಿರುವವರ ರಕ್ತದ ಮಾದರಿಯನ್ನು ಸಂಗ್ರಹಿಸಿ ಶಿವಮೊಗ್ಗದ ವೈರಾಣು ರೋಗ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ಸೋಂಕು ದೃಢಪಟ್ಟವರಿಗೆ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ನಿಯಂತ್ರಿಸಲು ಆರೋಗ್ಯ ಇಲಾಖೆ ಕಾರ್ಯತಂತ್ರ ರೂಪಿಸಿದ್ದು, ಅರ್ಹತೆ ಇಲ್ಲದೆ ವೈದ್ಯಕೀಯ ಸೇವೆ ನೀಡುವವರು ರಾಜ್ಯ ತೊರೆಯಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಆಯುರ್ವೇದ ವೈದ್ಯರು ತಮ್ಮ ಕಾನೂನುಬದ್ಧ ವ್ಯಾಪ್ತಿಯಲ್ಲೇ ಚಿಕಿತ್ಸೆ ನೀಡಬೇಕು. ಅನುಮತಿ ಇಲ್ಲದೆ ಇಂಜೆಕ್ಷನ್ ಸೇರಿದಂತೆ ಇತರೆ ಚಿಕಿತ್ಸಾ ವಿಧಾನಗಳನ್ನು ಅನುಸರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಹೊಸನಗರ ತಾಲೂಕಿನ ದೂರದ ಗ್ರಾಮಗಳ ಜನರ ಅನುಕೂಲಕ್ಕಾಗಿ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಸುಮಾರು 35 ಸಾವಿರ ಜನಸಂಖ್ಯೆಗೆ ಅನುಕೂಲವಾಗುವಂತೆ ನಾಲ್ಕರಿಂದ ಐದು ಎಕರೆ ಜಾಗ ಲಭ್ಯವಿದ್ದು, ಅಗತ್ಯ ಸಿಬ್ಬಂದಿ ಮತ್ತು ಮೂಲಸೌಕರ್ಯಗಳ ಕುರಿತು ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇನ್ನು ಗರ್ಭಕಂಠದ ಕ್ಯಾನ್ಸರ್ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಲಸಿಕಾ ಅಭಿಯಾನ ಆರಂಭಿಸಲಾಗಿದೆ. ಪೋಷಕರು ತಮ್ಮ 16 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್‌ಬಾನು ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sahachetana Natyaalaya ಮೊದಲ ಅಂತಾರಾಷ್ಟ್ರೀಯ ನೃತ್ಯಪ್ರದರ್ಶನ: ಕಲಾರಸಿಕರ ಮನಸೂರೆಗೈದ ಸಹಚೇತನ ನಾಟ್ಯಾಲಯ

ದುಬೈನಲ್ಲಿ ನಡೆದ ಗಲ್ಫ್ ರಾಷ್ಟ್ರಗಳ ಅತಿದೊಡ್ಡ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾದ 'ದುಬೈ...

ಆಹಾರ ತಯಾರಿಕೆ: ಸಂಸ್ಕರಣೆ ಮತ್ತು ವಿತರಣೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಅಳವಡಿಕೆ ಕಡ್ಡಾಯ- ಡಾ.ಎಚ್.ಪಿ.ಎಸ್.ಮೈತ್ರಿ

Rotary Club Shivamogga ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರದಿಂದ...

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ...