Sunday, November 29, 2026
Sunday, November 29, 2026

ಕೋಣಂದೂರು ರೋಟರಿ ಕ್ಲಬ್ ಗೆ ಪ್ರಪ್ರಥಮ ಬಾರಿಗೆ ವಲಯ ಮಟ್ಟದ ಕ್ರೀಡಾ ಚಾಂಪಿಯನ್ ಪ್ರಶಸ್ತಿ

Date:

ಕೊಣಂದೂರು ರೋಟರಿ ಕ್ಲಬ್ ತನ್ನ 25 ವರ್ಷಗಳ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ವಲಯ ಮಟ್ಟದ ಕ್ರೀಡಾ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಐತಿಹಾಸಿಕ ಸಾಧನೆ ಮಾಡಿದೆ.

ಕೊಣಂದೂರು ರೋಟರಿ ಕ್ಲಬ್ ಅಧ್ಯಕ್ಷ ಸಂದೇಶ್ ಕುಮಾರ್ ಹಾಗೂ ಕಾರ್ಯದರ್ಶಿ ಸುಧೀರ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಸಾಗರದಲ್ಲಿ ನಡೆದ ಜೋನಲ್ 11 ಮಟ್ಟದ ಕ್ರೀಡಾಕೂಟದಲ್ಲಿ ಕ್ಲಬ್‌ನ ಸದಸ್ಯರು ಅದ್ಭುತ ಪ್ರದರ್ಶನ ನೀಡಿ ಈ ಸಾಧನೆ ಮಾಡಿದ್ದಾರೆ.

ಜೋನಲ್ ಸ್ಪೋರ್ಟ್ಸ್ ಚೇರ್ಮನ್ ಡಾ. ಗಣೇಶ್ ಶೆಟ್ಟಿ ಹಾಗೂ ವೈಸ್ ಚೇರ್ಮನ್ ಬಿ.ಎಸ್. ರಾಘವೇಂದ್ರ ಅವರ ಮಾರ್ಗದರ್ಶನದಲ್ಲಿ ಸುಮಾರು 15 ದಿನಗಳ ಕಾಲ ನಿರಂತರ ಅಭ್ಯಾಸ ನಡೆಸಲಾಗಿತ್ತು. ಕ್ಲಬ್‌ನ ಸದಸ್ಯರು, ಮಹಿಳೆಯರು ಹಾಗೂ ಮಕ್ಕಳು ಅತ್ಯಂತ ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.

ಕ್ರೀಡಾಕೂಟದ ವಿವಿಧ ವಿಭಾಗಗಳಲ್ಲಿ 45ಕ್ಕೂ ಹೆಚ್ಚು ಸ್ಪರ್ಧೆಗಳಲ್ಲಿ ಜಯಗಳಿಸಿದ ಕೊಣಂದೂರು ರೋಟರಿ ಕ್ಲಬ್ ಒಟ್ಟು 274 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದು ವಲಯ ಮಟ್ಟದ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ.

ಕ್ಲಬ್‌ನ 25 ವರ್ಷಗಳ ಸುದೀರ್ಘ ಪಯಣದಲ್ಲಿ ಇದೇ ಮೊದಲ ಬಾರಿಗೆ ದೊರೆತಿರುವ ಈ ಅಭೂತಪೂರ್ವ ಗೆಲುವು ಸದಸ್ಯರಲ್ಲಿ ಸಂತಸ ಮತ್ತು ಹೆಮ್ಮೆಯನ್ನು ಮೂಡಿಸಿದೆ.

ಈ ಐತಿಹಾಸಿಕ ಸಾಧನೆಗೆ ಶ್ರಮಿಸಿದ ಎಲ್ಲಾ ರೋಟರಿ ಸದಸ್ಯರು, ಮಹಿಳಾ ಸದಸ್ಯರು, ಮಕ್ಕಳು, ತರಬೇತುದಾರರು ಹಾಗೂ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಕ್ಲಬ್‌ನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಅಭಿನಂದನೆ ಹಾಗೂ ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sahachetana Natyaalaya ಮೊದಲ ಅಂತಾರಾಷ್ಟ್ರೀಯ ನೃತ್ಯಪ್ರದರ್ಶನ: ಕಲಾರಸಿಕರ ಮನಸೂರೆಗೈದ ಸಹಚೇತನ ನಾಟ್ಯಾಲಯ

ದುಬೈನಲ್ಲಿ ನಡೆದ ಗಲ್ಫ್ ರಾಷ್ಟ್ರಗಳ ಅತಿದೊಡ್ಡ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾದ 'ದುಬೈ...

ಆಹಾರ ತಯಾರಿಕೆ: ಸಂಸ್ಕರಣೆ ಮತ್ತು ವಿತರಣೆಯಲ್ಲಿ ಸೂಕ್ತ ಸುರಕ್ಷತಾ ಕ್ರಮ ಅಳವಡಿಕೆ ಕಡ್ಡಾಯ- ಡಾ.ಎಚ್.ಪಿ.ಎಸ್.ಮೈತ್ರಿ

Rotary Club Shivamogga ಸುರಕ್ಷಿತ ಆಹಾರ ಪ್ರತಿಯೊಬ್ಬ ಗ್ರಾಹಕನ ಹಕ್ಕಾಗಿದ್ದು, ಆಹಾರದಿಂದ...

D.K. Shivakumar ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ- ಡಿ.ಕೆ.ಶಿವಕುಮಾರ್.

D.K. Shivakumar ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ...