Wednesday, October 2, 2024
Wednesday, October 2, 2024

ರಾಜ್ಯ ರಾಜಕಾರಣದ ಧ್ರುವ ತಾರೆ ಬಿ.ಎಸ್ ಯಡಿಯೂರಪ್ಪ

Date:

ಬಿ.ಎಸ್. ಯಡಿಯೂರಪ್ಪನವರ ಪೂರ್ಣ ಹೆಸರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ.
ಇವರು ಫೆ. 27, 1943ರಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಜನಿಸಿದರು. ತುಮಕೂರು ಜಿಲ್ಲೆಯ ಯಡಿಯೂರು ಊರಿನಲ್ಲಿರುವ ಸಿದ್ಧಲಿಂಗೇಶ್ವರ ದೇವರ ಹೆಸರನ್ನು ಇವರಿಗೆ ನಾಮಕರಣ ಮಾಡಲಾಗಿದೆ. ಇವರ ತಂದೆ ಸಿದ್ದಲಿಂಗಪ್ಪ ಮತ್ತು ತಾಯಿ ಪುಟ್ಟತಾಯಮ್ಮ. ಯಡಿಯೂರಪ್ಪನವರಿಗೆ ನಾಲ್ಕು ವರ್ಷವಿರುವಾಗಲೇ ತಾಯಿ ವಿಧಿವಶರಾದರು. ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರೈಸಿದ್ದಾರೆ.

1965ರಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆಯ ಗುಮಾಸ್ತರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಕೆಲಸಕ್ಕೆ ರಾಜೀನಾಮೆ ನೀಡಿ ಶಿಕಾರಿಪುರಕ್ಕೆ ತೆರಳಿ, ವೀರಭದ್ರ ಶಾಸ್ತ್ರಿಯವರ ಶಂಕರ ಅಕ್ಕಿ ಗಿರಣಿಯಲ್ಲಿ ಗುಮಾಸ್ತರಾಗಿ ಸೇರಿದರು.

1967ರಲ್ಲಿ ಮೈತ್ರಾದೇವಿಯವರನ್ನು ವಿವಾಹವಾದರು. ನಂತರ ಶಿವಮೊಗ್ಗದಲ್ಲಿ ಹಾರ್ಡ್‍ವೇರ್ ಮಳಿಗೆಯನ್ನು ತೆರೆದರು. ವಿಜಯೇಂದ್ರ, ರಾಘವೇಂದ್ರ, ಅರುಣಾದೇವಿ, ಪದ್ಮಾವತಿ, ಉಮಾದೇವಿಯವರು ಯಡಿಯೂರಪ್ಪನವರ ಮಕ್ಕಳು. 2004ರಲ್ಲಿ ಪತ್ನಿ ಮೈತ್ರಾದೇವಿಯವರು ಮರಣ ಹೊಂದಿದರು.

ಎಸ್.ಯಡಿಯೂರಪ್ಪನವರು ಕಾಲೇಜು ದಿನಗಳಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿದ್ದರು. 1970ರಲ್ಲಿ ಆರ್ರ್ ಎಸ್‍ಎಸ್‍ನ ಶಿಕಾರಿಪುರ ಘಟಕದ ಕಾರ್ಯ ನಿರ್ವಾಹಕರಾಗಿ ನೇಮಕಗೊಳ್ಳುವ ಮೂಲಕ ಸಾರ್ವಜನಿಕ ಜೀವನ ಪ್ರವೇಶಿಸಿದರು. ಜನಸಂಘದ ಶಿಕಾರಿಪುರ ತಾಲೂಕು ಅಧ್ಯಕರಾಗಿಯೂ ನೇಮಕಗೊಂಡರು. ನಂತರ 1972ರಲ್ಲಿ ಶಿಕಾರಿಪುರ ನಗರ ಪಾಲಿಕೆಗೆ ಚುನಾಯಿತರಾದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬಂಧಿತರಾದ ಯಡಿಯೂರಪ್ಪನವರು ಬಳ್ಳಾರಿ ಮತ್ತು ಶಿವಮೊಗ್ಗ ಜೈಲಿನಲ್ಲಿದ್ದರು. 1985ರಲ್ಲಿ ಬಿಜೆಪಿಯ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡರು. 1988ರಲ್ಲಿ ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡರು. 1983ರಲ್ಲಿ ಶಿಕಾರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. ನಂತರ ಒಟ್ಟು ಆರು ಬಾರಿ ಶಿಕಾರಿಪುರ ಕ್ಷೇತ್ರದ ಶಾಸಕರಾದರು. ಏಳು, ಎಂಟು, ಒಂಬತ್ತು, ಒಂಬತ್ತು, ಹತ್ತು, ಹನ್ನೆರಡು ಮತ್ತು ಹದಿಮೂರನೇ ವಿಧಾನಸಭೆಯ ಸದಸ್ಯರಾದರು.

1994ರ ವಿಧಾನಸಭೆ ಚುನಾವಣೆ ನಂತರ ವಿಧಾನಸಭೆಯ ಪ್ರತಿಪಕ್ಷ ನಾಯಕರಾದರು. 1999ರ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನನುಭವಿಸಿದ ಇವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದರು.

2004ರ ಚುನಾವಣೆಯಲ್ಲಿ ಪುನಃ ವಿಧಾನಸಭೆಗೆ ಆಯ್ಕೆಯಾಗಿ ಪ್ರತಿಪಕ್ಷ ನಾಯಕರಾದರು.

2008ರ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪನವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲದೊಂದಿಗೆ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರನ್ನು ಆಗ ಯಡಿಯೂರಪ್ಪನವರು 45,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು. ಆಗ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ದೊರೆತು, ದಕ್ಷಿಣ ಭಾರತದ ಮೊಟ್ಟ ಮೊದಲ ಬಿಜೆಪಿ ಸರಕಾರ ಕರ್ನಾಟಕದಲ್ಲಿ ರಚನೆಗೊಂಡಿತು. ಮೇ 30, 2008ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಎರಡನೇ ಬಾರಿ ಅಧಿಕಾರ ಸ್ವೀಕರಿಸಿದರು.

ಜುಲೈ 31, 2011ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡಿದರು. ನಂತರ ನವೆಂಬರ್ 30, 2011ರಂದು ಶಾಸಕ ಸ್ಥಾನ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ಯಡಿಯೂರಪ್ಪ ರಾಜೀನಾಮೆ ನೀಡಿದರು. 2011ರ ಏಪ್ರಿಲ್‍ನಲ್ಲಿ ಕರ್ನಾಟಕ ಜನತಾ ಪಕ್ಷ ಎಂಬ ನೂತನ ಪಕ್ಷವನ್ನು ನೋಂದಾಯಿಸಿದರು. 2012ರಲ್ಲಿ ಕರ್ನಾಟಕ ಜನತಾ ಪಕ್ಷಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. 2013ರ ಮೇನಲ್ಲಿ ಕರ್ನಾಟಕ ಜನತಾ ಪಕ್ಷದಿಂದ ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದರು.

ನವೆಂಬರ್ 2013ರಲ್ಲಿ ಯಾವುದೇ ಷರತ್ತಿಲ್ಲದೇ ಬಿಜೆಪಿಗೆ ಹಿಂದಿರುಗುವುದಾಗಿ ಯಡಿಯೂರಪ್ಪ ಘೋಷಿಸಿದರು. ಜನವರಿ 2, 2014ರಂದು ಬಿಜೆಪಿಯಲ್ಲಿ ಕೆಜೆಪಿಯನ್ನು ವಿಲೀನಗೊಳಿಸಿದರು. ನಂತರ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 3,63,305 ಅಂತರದಿಂದ ಜಯಗಳಿಸಿದರು.

ಯಡಿಯೂರಪ್ಪನವರು ನವೆಂಬರ್ 12,2007 ರಂದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ದಕ್ಷಿಣ ಭಾರತ ರಾಜ್ಯಗಳಲ್ಲಿ, ಬಿಜೆಪಿ ಪಕ್ಷದ ಮೊದಲ ಮುಖ್ಯಮಂತ್ರಿಯೆನಿಸಿದರು.

ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಯಡಿಯೂರಪ್ಪನವರು ಉಪ ಮುಖ್ಯಮಂತ್ರಿಯಾದರು. ಮೊದಲ 20 ತಿಂಗಳು ಕುಮಾರಸ್ವಾಮಿಯವರು ಮುಖ್ಯಮಂತ್ರಿ ಮತ್ತು ನಂತರದ 20 ತಿಂಗಳು ಯಡಿಯೂರಪ್ಪನವರು ಮುಖ್ಯಮಂತ್ರಿ ಎಂದು ಸರಕಾರ ರಚನೆ ಸಂದರ್ಭದಲ್ಲಿ ಉಭಯ ಪಕ್ಷಗಳ ನಡುವೆ ಒಪ್ಪಂದವಾಗಿತ್ತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿ ಯಡಿಯೂರಪ್ಪನವರು ಹಣಕಾಸು ಖಾತೆಗೂ ಸಚಿವರಾಗಿದ್ದರು.

ನ. 12, 2007ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿದರು. ಆದರೆ ಸಚಿವರಿಗೆ ಖಾತೆ ಹಂಚಿಕೆ ವೇಳೆ ಭಿನ್ನಮತ ಉಲ್ಬಣಗೊಂಡಿತು. ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಶ್ರ ಸರಕಾರ ಅಂತ್ಯಗೊಂಡು, ಯಡಿಯೂರಪ್ಪನವರು ನವೆಂಬರ್ 19, 2007ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದರು.

ಹೆಣ್ಣುಮಕ್ಕಳಿಗೆ ಲಕ್ಷ್ಮಿ ಭಾಗ್ಯ ಯೋಜನೆ, ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಸೈಕಲ್, ರೈತರ ಬಜೆಟ್, ಹೀಗೆ ಹತ್ತು ಹಲವು ಯೋಜನೆಗಳನ್ನು ಯಡಿಯೂರಪ್ಪನವರು ಜಾರಿಗೆ ತಂದರು.
ಬಿ.ಎಸ್ .ಯಡಿಯೂರಪ್ಪ ಅವರದ್ದು ಎಲ್ಲರನ್ನೂ ಒಳಗೊಂಡ ಪ್ರೇರಣಾರ್ಥಕ ಬದುಕು. ಇವರು ನೂರ್ಕಾಲ ಬಾಳಲಿ, ಜನರ ಬದುಕಿಗೆ ಸ್ಪೂರ್ತಿಯಾಗಲಿ ಎಂದು ಕೆ ಲೈವ್ ಮಾಧ್ಯಮ ಹಾರೈಸುತ್ತದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...