Monday, August 10, 2026
Monday, August 10, 2026

ಕೋವಿಡ್‍ನಿಂದ ಮೃತರಾದವರಿಗೆ ಘೋಷಿತ ಪರಿಹಾರಧನ ನೀಡಲು ಕ್ರಮ : ಕೆ.ಬಿ.ಶಿವಕುಮಾರ್

Date:

ಕೋವಿಡ್-19 ಸೋಂಕಿನಿಂದ ಮೃತ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರವು ಈಗಾಗಲೇ ಘೋಷಿಸಿರುವ ಆರ್ಥಿಕ ನೆರವನ್ನು ಒದಗಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಹಶೀಲ್ದಾರರು ಹಾಗೂ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಿಂದ ಏರ್ಪಡಿಸಲಾಗಿದ್ದ ಕೋವಿಡ್ ಮೃತ ಕುಟಂಬಕ್ಕೆ ಆರ್ಥಿಕ ನೆರವು ಒದಗಿಸುವುದು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಮನೆ, ಬೆಳೆ, ಆಸ್ತಿ, ಜನ-ಜಾನುವಾರು ಹಾನಿಗಳ ಕುರಿತ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ಸರ್ಕಾರವು  ಜಿಲ್ಲೆಯಲ್ಲಿ ಕೋವಿಡ್‍ನಿಂದ ಮೃತರಾದ ವ್ಯಕ್ತಿಗಳಲ್ಲಿ ಮೊದಲ ಹಂತದಲ್ಲಿ 1064ಜನ ಮೃತರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಮೃತರ ಕುಟುಂಬದ ಸದಸ್ಯರು ನೆರವಿಗಾಗಿ ಅರ್ಜಿ ಸಲ್ಲಿಸುವವರೆಗೆ ಕಾಯದೇ ಕಂದಾಯ ಇಲಾಖೆಯ ಅಧಿಕಾರಿಗಳು ಮೃತರ ಮನೆಗೆ ಧಾವಿಸಿ, ಅವರಿಂದ ಅರ್ಜಿ ಹಾಗೂ ಮಾಹಿತಿ ಪಡೆದು, ಆನ್‍ಲೈನ್ ಮೂಲಕ ಮಾಹಿತಿ ಉನ್ನತೀಕರಿಸಿ ಮಾಹಿತಿ ನೀಡುವಂತೆಯೂ ಅವರು ಸೂಚಿಸಿದರು.
ಮೃತರ ಕುಟುಂಬವು ಬಿ.ಪಿ.ಎಲ್. ಕುಟುಂಬ ವ್ಯಾಪ್ತಿಗೊಳಪಟ್ಟಿದ್ದರೆ ರಾಜ್ಯ ಸರ್ಕಾರವು ಒಂದು ಲಕ್ಷ ರೂ.ಗಳ ಆರ್ಥಿಕ ನೆರವು ಹಾಗೂ ಕೇಂದ್ರ ಸರ್ಕಾರವು ಕೋವಿಡ್‍ನಿಂದ ಮೃತರಾದ ಎಲ್ಲಾ ಕುಟುಂಬಗಳಿಗೆ ರೂ.50,000/-ಗಳ ನೆರವು ಒದಗಿಸಲಿದೆ. ಈ ಪರಿಹಾರಧನ ಪಡೆಯಲು ಜಿಲ್ಲೆಯಲ್ಲಿ ಸಲ್ಲಿಕೆಯಾದ ಅರ್ಜಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಸಂಬಂಧಿತ ಅಧಿಕಾರಿಗಳು ಇನ್ನಾದರೂ ವಿಳಂಬಕ್ಕೆ ಅವಕಾಶ ಕೊಡದೆ ಈ ತಿಂಗಳ ಮಾಸಾಂತ್ಯದೊಳಗಾಗಿ ಮಾಹಿತಿಯನ್ನು ಸಂಗ್ರಹಿಸಿ, ಫಲಾನುಭವಿಗಳಿಗೆ ಸೌಲಭ್ಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ತಾಕೀತು ಮಾಡಿದರು.
ಆನ್‍ಲೈನ್‍ನಲ್ಲಿ ಮಾಹಿತಿ ತುಂಬಲು ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಆರೋಗ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದ ಅವರು, ಮೃತ ವ್ಯಕ್ತಿಯು ಹೊರಗಿನ ಜಿಲ್ಲೆಯವರಾಗಿದ್ದಲ್ಲಿ ಅಂತಹವರು ತಮ್ಮ ಮೂಲ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ,ನಾಗೇಂದ್ರ ಎಫ್.ಹೊನ್ನಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ,ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕೆ.ನಾಗರಾಜ್, ಆರ್.ಸಿ.ಹೆಚ್.ಅಧಿಕಾರಿ ಡಾ,ನಾಗರಾಜ್‍ನಾಯ್ಕ್ ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರು, ತಾಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...