Monday, September 21, 2026
Monday, September 21, 2026

ಅತ್ಯಾಚಾರಿಗೆ ಹತ್ತು ವರ್ಷ ಜೈಲು

Date:

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಅಪ್ರಾಪ್ತೆ ಮೇಲೆ 2019ರಲ್ಲಿ ಅತ್ಯಾಚಾರ ಎಸಗಿದ್ದ ಮನ್ಸೂರ್ ಎಂಬ ವ್ಯಕ್ತಿಗೆ ಹತ್ತು ವರ್ಷ ಜೈಲು ಶಿಕ್ಷೆ‌ ಹಾಗೂ ಹತ್ತು ಸಾವಿರ ರೂಪಾಯಿ‌ ದಂಡ ವಿಧಿಸಿದ ಪೊಕ್ಸೋ ನ್ಯಾಯಾಲಯ ಆದೇಶ ನೀಡಿದೆ. ಆರೋಪಿಯು ದಂಡದ ಮೊತ್ತ ಪಾವತಿಸದಿದ್ದಲ್ಲಿ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸು ಆದೇಶ ಸಹ ಮಾಡಿದೆ.
ಮನ್ಸೂರ್ ಎಂಬ ವ್ಯಕ್ತಿ 16 ವರ್ಷದ ಅಪ್ರಾಪ್ತೆಯನ್ನು ಮನೆಗೆ ಟಿವಿ ನೋಡುವ ನೆಪದಲ್ಲಿ ಕರೆದು ಆಕೆ ಮೇಲೆ ಅತ್ಯಾಚಾರ ಎಸಗಿದ್ದ.
ಜೊತೆಗೆ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಲ್ಲದೆ ಬೀಡಿಯಿಂದ‌ ಆಕೆಯ ಬಲಗೈ ಸುಟ್ಟಿದ್ದ.ಈ ಬಗ್ಗೆ 2019ರಲ್ಲಿ ಶಿವಮೊಗ್ಗ ಮಹಿಳಾ‌ಠಾಣೆಯಲ್ಲಿ ಪ್ರಕರಣ‌ ದಾಖಲಾಗಿತ್ತು. ಪ್ರಕರಣ‌ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದ ಪೋಲಿಸ್ ಅಧಿಕಾರಿ ಅಭಯಪ್ರಕಾಶ್ ಸೋಮನಾಳ್‌ ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ‌ ನಡೆಸಿದ ಪೊಕ್ಸೋ‌ ನ್ಯಾಯಾಲಯದ ನ್ಯಾಯಾಧೀಶ‌ ದಯಾನಂದ್ ಅವರು ಆರೋಪಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ‌ ವಿಧಿಸಿ ತೀರ್ಪು‌ ನೀಡಿದ್ದಾರೆ.
ಸರ್ಕಾರದ‌ ಪರವಾಗಿ ಸರ್ಕಾರಿ ಅಭಿಯೋಜಕ ಸತೀಶ್ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...