Thursday, December 11, 2025
Thursday, December 11, 2025

ವಿದ್ಯಾರ್ಥಿಗಳಿಗೆ ಪಾಠ ಹೇಳಿದ ರೋಬೋ ಬೆಂಗಳೂರಲ್ಲಿ ಪ್ರಾತ್ಯಕ್ಷಿಕೆ

Date:

ಪಾಠ- ಪ್ರವಚನಗಳಲ್ಲಿ ಬೋಧಕರಿಗೂ ವಿದ್ಯಾರ್ಥಿಗಳಿಗೂ ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ `ಈಗಲ್’ ರೋಬೋ ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬುಧವಾರದಂದು ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.

ಶಾಲೆಯ ಬೋಧಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋದ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಅವರು ರೋಬೊಗೆ ಹಲವು ಪ್ರಶ್ನೆಗಳನ್ನು ಕೇಳಿದರು. ಹಾಗೆಯೇ, ಅದು ನೀಡಿದ ಉತ್ತರ ಮತ್ತು ನೆರವನ್ನು ಕಂಡು ಬೆರಗಾದರು.

ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು, ಇದು ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ರೋಬೋದ ಕಾರ್ಯ ಸಾಮರ್ಥ್ಯವನ್ನು ವೀಕ್ಷಿಸಲಾಗಿದೆ. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆಯ ಸಲುವಾಗಿ, ಇಂತಹ ರೋಬೋ ಗಳು ಇದ್ದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

ರೋಬೊ‌ ಶಿಕ್ಷಕರಿಗೆ ಪರ್ಯಾಯ ಅಲ್ಲ. ಆದರೆ ಶಿಕ್ಷಕರಿಗೆ ಬೋಧನೆಯಲ್ಲಿ ಸಹಕರಿಸುವ ಕೆಲಸ ಮಾಡಲಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಕೂಡ ಹೆಚ್ಚಾಗಲಿದೆ ಎಂದು ಹೇಳಿದರು.

21ನೇ ಶತಮಾನವು ತಂತ್ರಜ್ಞಾನದ ಯುಗವಾಗಿದ್ದು, ಬೋಧನೆಯಲ್ಲಿ ಇದರ ಅಳವಡಿಕೆ ಅಗತ್ಯವಾಗಿದೆ. ಇದರಿಂದಾಗಿ, ಸರಕಾರಿ ಶಾಲಾಕಾಲೇಜುಗಳು ಕೂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆಯಿಲ್ಲದಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಬಹುದು. ಇದರಿಂದ ಬಡ ಕುಟುಂಬಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಮುಂದಿನ ದಿನಗಳಲ್ಲಿ `ಈಗಲ್’ ರೋಬೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ತೋರಿಸಲಾಗುವುದು. ನಂತರ ಅವರಿಂದಲೇ ಈ ಯೋಜನೆಗೆ ಚಾಲನೆ‌ ಕೊಡಿಸುವ ಉದ್ದೇಶ ಇದೆ ಎಂದರು.

ಮಲ್ಲೇಶ್ವರ ಕ್ಷೇತ್ರದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಇದನ್ನು ಜಾರಿ ಮಾಡುವ ಉದ್ದೇಶ ಇದೆ ಎಂದು ಅವರು ವಿವರಿಸಿದರು.

ಇಂಡಸ್ ಟ್ರಸ್ಟ್ ನ ಸ್ಥಾಪಕ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಲೆ.ಜನರಲ್ ಅರ್ಜುನ್ ರಾಯ್ ಈ ಸಂದರ್ಭದಲ್ಲಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sahyadri Narayana Multispeciality Hospital ವಿಐಎಸ್‌ಎಲ್‌ವತಿಯಿಂದ ಸಾಮಾಜಿಕ ಕಳಕಳಿಯ ಅಂಗವಾಗಿ ಉಚಿತ ವೈಧ್ಯಕೀಯ ಆರೋಗ್ಯ ಶಿಬಿರ

Sahyadri Narayana Multispeciality Hospital ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ...

ಪ.ಜಾ. ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್‌ಶಿಪ್ ತರಬೇತಿಗೆ ಅರ್ಜಿ ಆಹ್ವಾನ

Information and Public Relations Department ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...

District Chamber of Commerce and Industry ಡಿಸೆಂಬರ್ 15ಕ್ಕೆ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ವೈಭವ

District Chamber of Commerce and Industry ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ...

ರಾಜಹಂಸ ಬಸ್‌ ಡಿಕ್ಕಿಯಾಗಿ ಯುವಕನ ಸಾವು

ಡೆವಿಲ್‌ ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್‌ ಡಿಕ್ಕಿಯಾಗಿ...