Sunday, December 7, 2025
Sunday, December 7, 2025

ಒಂದು ತಿಂಗಳೊಳಗೆ ಬಿ.ಪಿ.ಎಲ್. ಪಡಿತರ ಚೀಟಿ ವಿತರಣೆ- ಉಮೇಶ್ ಕತ್ತಿ

Date:

ರಾಜ್ಯದಲ್ಲಿ ಹೊಸದಾಗಿ ಆದ್ಯತಾ ಪಡಿತರ ಚೀಟಿ (ಬಿಪಿಎಲ್ ಕಾರ್ಡ್) ಬಯಸಿ ಅರ್ಜಿ ಸಲ್ಲಿಸಿದವರ ಪೈಕಿ ಮನೆ ಮನೆ ಸಮೀಕ್ಷೆ ಪೂರ್ಣಗೊಂಡ 4.25 ಲಕ್ಷ ಅರ್ಜಿದಾರರ ಜೈವಿಕ ದತ್ತಾಂಶ ಸಂಗ್ರಹಿಸಿ, ಒಂದು ತಿಂಗಳೊಳಗೆ ಪಡಿತರ ಚೀಟಿ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಭರವಸೆ ನೀಡಿದರು.

ವಿಧಾನಪರಿಷತ್​ನಲ್ಲಿ ಕಾಂಗ್ರೆಸ್​ನ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಮೂರು ವರ್ಷ (2022ರ ಫೆಬ್ರವರಿ ಅಂತ್ಯ)ಗಳಲ್ಲಿ ಆದ್ಯತಾ ಪಡಿತರ ಚೀಟಿ ಕೋರಿ ಒಟ್ಟು 15,53,745 ಅರ್ಜಿಗಳು ಸ್ವೀಕೃತವಾಗಿವೆ.
ಇದರಲ್ಲಿ 8,03,782 ಅರ್ಹ ಅರ್ಜಿದಾರರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಿಸಲಾಗಿದೆ ಎಂದರು.

ಕೊರೊನಾ ಹಾವಳಿ ಕಾರಣಕ್ಕೆ ಮನೆ ಮನೆ ಸಮೀಕ್ಷೆ, ಜೈವಿಕ ತಂತ್ರಾಂಶ ಸಂಗ್ರಹ ಸ್ಥಗಿತವಾಗಿತ್ತು. ಇದರಿಂದ ಪಡಿತರ ಚೀಟಿ ವಿತರಣೆ ವಿಳಂಬವಾಗಿದೆ ಎಂದರು.

ಉಳಿದ ಅರ್ಜಿದಾರರ ಮನೆ ಮನೆ ಸಮೀಕ್ಷೆ, ದತ್ತಾಂಶ ಸಂಗ್ರಹ ಕಾರ್ಯ ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ಬಿಪಿಎಲ್ ಕಾರ್ಡ್ ನೀಡಲಾಗುವುದು. ಇಲಾಖೆ ಕೈಗೊಂಡ ವಿಶೇಷ ಕ್ರಮದಿಂದ ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಉಳಿದವರ ಹೊಂದಿದ್ದ 13 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ವಾಪಸ್ ಪಡೆಯಲಾಗಿದೆ ಎಂಬ ಕತ್ತಿ ಮಾಹಿತಿ ನೀಡಿದರು.

ಕಚ್ಚಾ ತೈಲ, ಖಾದ್ಯ ತೈಲ ಹಾಗೂ ಕಬ್ಬಿಣದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆ ಅವಲಂಬಿತವಾದ ಕಾರಣ ಮುಕ್ತ ಮಾರುಕಟ್ಟೆಯಲ್ಲಿ ಇವುಗಳ ಬೆಲೆ ನಿಯಂತ್ರಣ ಅಸಾಧ್ಯ. ಆದರೆ ಕೃತಕ ಅಭಾವ ಸೃಷ್ಟಿ, ಅಧಿಕ ಬೆಲೆಗೆ ಮಾರಾಟ ತಡೆಗೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಕಾಂಗ್ರೆಸ್​ನ ಎಸ್.ರವಿ ಪ್ರಶ್ನೆಗೆ ಉಮೇಶ್ ಕತ್ತಿ ಉತ್ತರಿಸಿದರು.

ಖಾದ್ಯತೈಲ ಅಕ್ರಮ ದಾಸ್ತಾನು, ಅಧಿಕ ಬೆಲೆಗೆ ಮಾರಾಟ ನಿಯಂತ್ರಣಕ್ಕಾಗಿ ಕಳೆದ 1,368 ತಪಾಸಣೆಗಳಾಗಿವೆ. ಹೆಚ್ಚಿನ ಬೆಲೆಗೆ ಮಾರಾಟಕ್ಕೆ ಸಂಬಂಧಿಸಿ ಇದುವರೆಗೆ 75 ಮೊಕದ್ದಮೆಗಳನ್ನು ಹೂಡಿದ್ದು, 29 ದಾವೆಗಳಲ್ಲಿ 2,96,000 ರೂ. ದಂಡ ವಸೂಲಿ ಮಾಡಲಾಗಿದೆ. ಡಿಸೇಲ್ ಹಾಗೂ ಪೆಟ್ರೋಲ್ ಮೇಲೆ ರಾಜ್ಯ ವಿಧಿಸುತ್ತಿರುವ ಸೆಸ್ ಇಳಿಕೆ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಸೆಸ್ ಪರಿಷ್ಕರಣೆ ವಿಷಯವು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದು ಎಂದು ಉಮೇಶ್ ಕತ್ತಿ ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...