Monday, August 24, 2026
Monday, August 24, 2026

ನ್ಯಾ.ಕೆ.ಎನ್. ಫಣೀಂದ್ರ ಉಪ ಲೋಕಾಯುಕ್ತರಾಗಿಪ್ರಮಾಣ ವಚನ ಸ್ವೀಕಾರ

Date:

ಕಳೆದ ಕೆಲ ವರ್ಷಗಳಿಂದ ಖಾಲಿ ಇದ್ದಂತ ಉಪ ಲೋಕಾಯುಕ್ತ ಹುದ್ದೆಗೆ ರಾಜ್ಯ ಸರ್ಕಾರದಿಂದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಂ.ಫಣೀಂದ್ರ ಅವರನ್ನು ನೇಮಕ ಮಾಡಲಾಗಿತ್ತು.

ಅವರು, ಇಂದು ಉಪ ಲೋಕಾಯುಕ್ತರಾಗಿ ಪ್ರಾಮಾಣ ವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಂಡಿದ್ದಾರೆ.
ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ ಎನ್ ಫಣಿಂದ್ರ ಅವರಿಗೆ ಉಪಲೋಕಾಯುಕ್ತ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಭೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ, ಗೃಹ ಸಚಿವ ಅರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ, ಶಾಸಕ ಸುರೇಶ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...