ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕವು ಅಧಿಕೃತ ಅಧಿಸೂಚನೆ ಮೂಲಕ ಪ್ರೋಗ್ರಾಮರ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ಸರ್ಕಾರದಲ್ಲಿ ಬಹಳ ದಿನಗಳಿಂದ ಕೆಲಸ ಹುಡುಕುತ್ತಿರುವ ಮತ್ತು ಮೈಸೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 8ರ ಮೊದಲು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಖಾಲಿ ಇರುವ 2 ಪ್ರೋಗ್ರಾಮರ್ ಹುದ್ದೆಗಳ ಭರ್ತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದಾಗಿದೆ.
ಬ್ಯಾಚುಲರ್ ಆಫ್ ಇಂಜಿನಿಯರಿಂಗ್, ಮಾಸ್ಟರ್ಸ್ ಇನ್ ಕಂಪ್ಯೂಟರ್ ಅಪ್ಲಿಕೇಶನ್ ಪದವಿ ಪೂರ್ಣಗೊಳಿಸಿರುವ 56 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಏಪ್ರಿಲ್ 8 ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನು ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.40000/- ವೇತನ ನೀಡಲಾಗುತ್ತದೆ.
ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಬ್ಯಾಚುಲರ್ ಆಫ್ ಇಂಜಿನಿಯರಿಂಗ್, ಮಾಸ್ಟರ್ಸ್ ಇನ್ ಕಂಪ್ಯೂಟರ್ ಅಪ್ಲಿಕೇಶನ್‌ಗಳನ್ನು ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳು ವೆಬ್ ಅಭಿವೃದ್ಧಿ ಮತ್ತು ವಿನ್ಯಾಸದಲ್ಲಿ ಕನಿಷ್ಠ 02 ವರ್ಷಗಳ ಅನುಭವವನ್ನು ಹೊಂದಿರಬೇಕು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 28-03-2022 ರಂತೆ 55 ವರ್ಷಗಳು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನಿಯಮಾವಳಿಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ನಿರ್ದೇಶಕರು, ಅಬ್ದುಲ್ ನಜೀರ್ ಸಾಬ್ ಸ್ಟೇಟ್ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್‌ಮೆಂಟ್ ಮತ್ತು ಪಂಚಾಯತ್ ರಾಜ್, ಲಲಿತಮಹಲ್ ರಸ್ತೆ, ಮೈಸೂರು – 570011 ಇವರಿಗೆ ಕಳುಹಿಸಬೇಕಾಗುತ್ತದೆ.
ವೆಬ್ಸೈಟ್: rdpr.karnataka.gov.in
ಪ್ರಮುಖ ದಿನಾಂಕಗಳು ಹೀಗಿವೆ:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-03-2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-202