Monday, December 8, 2025
Monday, December 8, 2025

ಹುಂಚ ತಂಬಾಕು ಮುಕ್ತ ಗ್ರಾಮವೆಂದು ಘೋಷಿಸಲು ಕ್ಷಣಗಣನೆ- ಡಾ.ಸೆಲ್ವಮಣಿ

Date:

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ನಿರ್ಬಂಧಿತ ಪ್ರದೇಶ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸಲು ನಿರಂತರ ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಕಳೆದ ಒಂದು ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘನೆಯ 582 ಪ್ರಕರಣಗಳಲ್ಲಿ 64460 ರೂ. ದಂಡ ವಸೂಲು ಮಾಡಲಾಗಿದೆ.

ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕು ಹೊರತುಪಡಿಸಿ ಬೇರೆ ತಾಲೂಕುಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ದಾಳಿಗಳನ್ನು ಹೆಚ್ಚಿಸಬೇಕು. ತಾಲೂಕು ಮಟ್ಟದ ಸಮಿತಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಮಾತ್ರವಲ್ಲದೆ ನಗರ ಸ್ಥಳೀಯ ಸಂಸ್ಥೆಗಳು ಈ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು ಎಂದು ಹೇಳಿದರು.

ಶಾಲಾ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ಅವಕಾಶ ನೀಡಬಾರದು. ತಂಬಾಕು ಉತ್ಪನ್ನಗಳ ಕುರಿತಾಗಿ ಪ್ರತ್ಯಕ್ಷ ಅಥವಾ ಪರೋಕ್ಷ ಜಾಹೀರಾತಿಗೆ ಅವಕಾಶ ನೀಡಬಾರದು. ಶಾಲಾ ಕಾಲೇಜುಗಳ ಆವರಣದಲ್ಲಿ ರಾತ್ರಿ ವೇಳೆ ಧೂಮಪಾನ ಅಥವಾ ಮದ್ಯಪಾನ ಮಾಡುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಪ್ರಕರಣಗಳನ್ನು ದಾಖಲಿಸಲು ಈಗಾಗಲೇ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ತಂಬಾಕು ವ್ಯಸನ ಮುಕ್ತ ಕೇಂದ್ರ ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಸಾಲಿನಲ್ಲಿ ಕೇವಲ 3908 ಮಂದಿ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಮನೋ ಚೈತನ್ಯ ಕಾರ್ಯಕ್ರಮದಡಿಯಲ್ಲಿ ಎಲ್ಲಾ ತಾಲೂಕುಗಳಲ್ಲಿ ಸಹ ತಂಬಾಕು ವ್ಯಸನ ಮುಕ್ತ ಕೌನ್ಸಿಲಿಂಗ್ ವ್ಯವಸ್ಥೆ ಮಾಡಬೇಕು. ತಂಬಾಕು ಚಟದಿಂದ ಮುಕ್ತರಾದರೆ ಬೇರೆ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆ ಕಡಿಮೆ ಎಂದು ಅವರು ಅಭಿಯಪ್ರಾಯಪಟ್ಟರು.

ಹೊಸನಗರ ತಾಲೂಕಿನ ಹುಂಚ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಇದೇ ಮಾದರಿಯಲ್ಲಿ ಜಿಲ್ಲೆಯಲ್ಲಿ ಇನ್ನಷ್ಟು ಗ್ರಾಮಗಳನ್ನು ತಂಬಾಕು ಮುಕ್ತ ಮಾಡಲು ಕ್ರಮ ವಹಿಸಬೇಕು ಎಂದರು.

ರೇಬಿಸ್ ಲಸಿಕೆ ಕಡ್ಡಾಯವಾಗಿ ಹಾಕಿ: ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ರೇಬಿಸ್‌ಗೆ ಇಬ್ಬರು ಬಲಿಯಾಗಿರುವುದು ಕಳವಳಕಾರಿ. ಜಿಲ್ಲೆಯಲ್ಲಿ ಪ್ರತಿಯೊಂದು ಸಾಕಿದ ನಾಯಿಗೆ ಲಸಿಕೆಯನ್ನು ಕಡ್ಡಾಯವಾಗಿ ಹಾಕಬೇಕು. ಪಶುವೈದ್ಯಕೀಯ ಇಲಾಖೆ ಈ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು. ಬೀದಿನಾಯಿಗಳನ್ನು ನಿಯಂತ್ರಣ ಮಾಡುವ ಕುರಿತು ಸ್ಥಳೀಯ ಸಂಸ್ಥೆಗಳು ಸೂಕ್ತ ಕ್ರಮ ಜರುಗಿಸಬೇಕು ಎಂದರು.

ಪ್ರತಿಯೊಂದು ಆಸ್ಪತ್ರೆಯಲ್ಲಿ ರೇಬಿಸ್ ವ್ಯಾಕ್ಸಿನ್ ಲಭ್ಯತೆಯನ್ನು ಖಾತ್ರಿಪಡಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಆರ್‌ಸಿಎಚ್ ಅಧಿಕಾರಿ ಡಾ. ನಾಗರಾಜ ನಾಯಕ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...