ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರ ಸರಕಾರದ ವಿರುದ್ಧ ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಗುರುವಾರ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿ ಗಮನ ಸೆಳೆಯಿತು.
ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ ಹೆಸರಿನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.
ಗ್ಯಾಸ್ ಸಿಲಿಂಡರ್ ಗಳನ್ನು ಸಾಲಾಗಿ ಇರಿಸಿ ಹೂವಿನ ಹಾರಗಳನ್ನು ಹಾಕಲಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಕೈಯಲ್ಲಿ ಘಂಟಾಮಣಿ ಹಿಡಿದು , ತಲೆಯ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಎಲ್ಲರ ಗಮನ ಸೆಳೆದರು.