Friday, December 12, 2025
Friday, December 12, 2025

ಕುವೆಂಪು ವಿವಿಯಲ್ಲಿ ಬಾಬು ಜಗಜೀವನರಾಂ ಜಯಂತಿ ಆಚರಣೆ

Date:

ಬರುವ ಏಪ್ರಿಲ್ 05ರಂದು ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಕುವೆಂಪು ವಿಶ್ವವಿದ್ಯಾಲಯದ ಡಾ.‌ ಬಾಬು ಜಗಜೀವನ್ ರಾಮ್ ಸಂಶೋಧನಾ ಮತ್ತು ಅಧ್ಯಯನ ಕೇಂದ್ರ “ಅಂಚಿನಲ್ಲಿರುವ ಸಮುದಾಯಗಳು ಮತ್ತು ಸಾಮಾಜಿಕ ನ್ಯಾಯ” ಕುರಿತು ವಿವಿಯ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಕರ್ನಾಟಕ ಜಾನಪದ ಅಕಾಡೆಮಿ‌ ಅಧ್ಯಕ್ಷರಾದ ಪದ್ಮಶ್ರೀ ಬಿ.‌ಮಂಜಮ್ಮ ಜೋಗತಿ ಕಾರ್ಯಕ್ರಮವನ್ನು ಏಪ್ರಿಲ್ 05ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ.

ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ. ಕೆ. ಎಂ. ಮೇತ್ರಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಅಂಕಣಕಾರ ಡಾ. ಅರುಣ್ ಜೋಳದಕೂಡ್ಲಿಗಿ ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆಗಳ ಬಗ್ಗೆ ಮತ್ತು ಡಾ. ಕೆ. ಆರ್. ಮಂಜುನಾಥ್ ದಲಿತ ಮತ್ತು ಆದಿವಾಸಿ ಸಮುದಾಯಗಳಲ್ಲಿ ಉದ್ಯಮಶೀಲತೆ ಕುರಿತು ಮಾತನಾಡಲಿದ್ದಾರೆ.

ಖ್ಯಾತ ಜಾನಪದ ಗಾಯಕ ಮತ್ತು ಅಕಾಡೆಮಿ ಸದಸ್ಯ ಜೋಗಿಲ ಸಿದ್ದರಾಜು, ಈದಿನ ಡಾಟ್ ಕಾಂ ನ ಸುದ್ದಿ ಸಂಪಾದಕ ಬಿ. ವಿ. ಶ್ರೀನಾಥ್, ವಿಜಯ ಕರ್ನಾಟಕ ಪತ್ರಿಕೆಯ ಬಿ. ಎನ್. ಅನಿಲ್ ಕುಮಾರ್ ಭಾಗವಹಿಸಲಿದ್ದಾರೆ.

ವಿವಿಧ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪ್ರತಿನಿಧಿಗಳು ವಿಚಾರ ಮಂಡಿಸಲಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಡಾ. ಸತ್ಯಪ್ರಕಾಶ್ ಎಂ. ಆರ್ ತಿಳಿಸಿದ್ದಾರೆ.

ಪುಸ್ತಕ ಬಿಡುಗಡೆ: ಕುವೆಂಪು ವಿವಿ ಬಾಬು ಜಗಜೀವನ್ ರಾಮ್ ಅಧ್ಯಯನ ಕೇಂದ್ರ ಹೊರತಂದಿರುವ “ಸಂಸತ್ತಿನಲ್ಲಿ ಬಾಬು ಜಗಜೀವನ್ ರಾಮ್ ಭಾಷಣಗಳು, ಸಂ. 01: ರಕ್ಷಣೆ” ಕೃತಿಯು ಇದೇ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Human Rights Commission ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್

Human Rights Commission ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು,...

ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ

ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ...

Sahyadri Narayana Hospital ವೈದ್ಯರ ಚಿಕಿತ್ಸೆಯಿಂದ ತಾಯಿಗೆ ದೃಷ್ಟಿ, ಅವಧಿಪೂರ್ವ ಮಗುವಿಗೆ ಜೀವದಾನ

Sahyadri Narayana Hospital 25 ವರ್ಷದ ಯುವತಿ ಗಂಡನ ಜೊತೆ ಸಂತೋಷವಾಗಿದ್ದಳು....

Akashavani Bhadravati ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳ ಪ್ರಸಾರ

Akashavani Bhadravati ಡಿ 15 ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿದಿನ...