Monday, October 7, 2024
Monday, October 7, 2024

ಮನೆ ಮನೆಗೆ ಗಂಗೆ ಯೋಜನೆಯಲ್ಲಿ ರಾಜ್ಯದ ಪ್ರಗತಿ ಉತ್ತಮ- ಈಶ್ವರಪ್ಪ

Date:

ರಾಜ್ಯದ ಪ್ರತಿ ಮನೆಗೆ ಪೈಪ್ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆಯ ಮನೆ ಮನೆಗೆ ಗಂಗೆ ಯೋಜನೆಯ ಪ್ರಗತಿಯು ರಾಜ್ಯದಲ್ಲಿ ಉತ್ತಮವಾಗಿದೆ.

ಈಗಾಗಲೇ ಶೇ 46ರಿಂದ ಶೇ 47ರಷ್ಟು ಮನೆಗಳಿಗೆ ಸಂಪರ್ಕ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಗೋಕರ್ಣ ಸಮೀಪದ ತೊರ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳಲೆಯಲ್ಲಿ ಅಂದಾಜು ₹ 31 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಪ್ರತಿ ಮನೆಗೂ ಒಂದೂವರೆ ವರ್ಷದೊಳಗೆ ನಲ್ಲಿ ಮೂಲಕ ನೀರು ಪೂರೈಕೆ ಮಾಡಲಾಗುವುದು. ರಾಜ್ಯದ 97 ಲಕ್ಷ ಮನೆಗಳ ಪೈಕಿ ಈಗಾಗಲೇ 47 ಲಕ್ಷ ಮನೆಗಳಿಗೆ ಪೈಪ್ ಸಂಪರ್ಕ ನೀಡಲಾಗಿದೆ ಎಂದು ತಿಳಿಸಿದರು.

ಉದ್ಯೋಗ ಖಾತ್ರಿಯಲ್ಲಿ ಮಾನವ ದಿನಗಳ ಸೃಜನೆಯಲ್ಲಿ ರಾಜ್ಯವು ದೇಶಕ್ಕೆ ಮೊದಲ ಸ್ಥಾನದಲ್ಲಿದೆ. ರಾಜ್ಯಕ್ಕೆ ನೀಡಲಾಗಿದ್ದ 13 ಕೋಟಿ ಮಾನವ ದಿನಗಳ ಗುರಿಗೆ ಪ್ರತಿಯಾಗಿ 16.68 ಕೋಟಿ ಮಾನವ ದಿನಗಳನ್ನು ಸೃಜಿಸಲಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

ಶಾಸಕ ದಿನಕರ ಶೆಟ್ಟಿ ಮಾತನಾಡಿ, ‘ಬಳಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 2002ರಲ್ಲಿ ಅಂದಿನ ಶಾಸಕ ಮೋಹನ ಶೆಟ್ಟಿ ಚಾಲನೆ ನೀಡಿದ್ದರು. ಆದರೆ, ಹಲವಾರು ಅಡೆತಡೆಗಳ ಬಳಿಕ ಈ ವರ್ಷ ಪೂರ್ಣಗೊಂಡಿದೆ. ಇದರಿಂದ ಕುಮಟಾ ಮತ್ತು ಅಂಕೋಲಾ ತಾಲ್ಲೂಕುಗಳ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಅಳಕೋಡ ಗ್ರಾಮ ಪಂಚಾಯಿತಿಯ 12 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಗೆ ಮಂಜೂರಾತಿ ಕೊಡಲಾಗಿದೆ. ಬರ್ಗಿ ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಮಂಜೂರಾತಿ ನೀಡಬೇಕಿದೆ ಎಂದು ಗಮನ ಸೆಳೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...