ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸ್ಪೂರ್ತಿದಾಯಿನಿ, ಪ್ರಗತಿಗಾಮಿನಿ ನಾ ಹೆಣ್ಣೇಂಬುವುದೇ ಹೆಮ್ಮೆ ಕಾರ್ಯಕ್ರಮ ನಡೆಯಿತು.
ಖ್ಯಾತ ಗಮಕಿ ವಾಚಕರು, ವಿದ್ವಾನ್ ಪದ್ಮಶ್ರೀ ಹೆಚ್.ಆರ್. ಕೇಶವಮೂರ್ತಿಯವರೊಂದಿಗೆ ಗಣ್ಯರೂ ಸೇರಿ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಶ್ರೀ ಸಿ.ಎಸ್. ಷಡಕ್ಷರಿಯವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರ ಯಶೋಗಾಥೆಯನ್ನು ಸ್ಮರಿಸಿಕೊಂಡರು. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದ ಸಾವಿತ್ರಿಬಾಯಿ ಫುಲೆ ಅವರನ್ನು ಯಾರು ಮರೆಯಬಾರದು ಎಂದರು. ಸಮಾಜದಲ್ಲಿ ಕೆಟ್ಟ ತಂದೆ, ಕೆಟ್ಟ ಸಹೋದರರೆ ರಬಹುದು, ಆದರೆ ಕೆಟ್ಟ ತಾಯಿಯನ್ನೂ ಎಲ್ಲೂ ಕಾಣಲು ಸಾಧ್ಯವಿಲ್ಲ. ಮಹಿಳೆ ತ್ಯಾಗದ, ಸೇವೆಯ ಪ್ರತೀಕ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಸಕ ಕೆ.ಎಸ್. ಈಶ್ವರಪ್ಪನವರು ಮಾತನಾಡುತ್ತಾ, ಭಾರತೀಯ ಸಂಸ್ಕೃತಿ ದೇಶಾದ್ಯಂತ ಪಸರಿಸಿದೆ. ಯಾವ ಮನೆಯಲ್ಲಿ ಹೆಣ್ಣು ಮಕ್ಕಳು ಇರುತ್ತಾರೋ ಆ ಮನೆ ಎಂದಿಗೂ ಸಂತೋಷದಿಂದ ಕೂಡಿರುತ್ತದೆ. ಇಂದಿನ ಹೆಣ್ಣುಮಕ್ಕಳು ಯಾರಿಗೂ ಕಡಿಮೆಯಿಲ್ಲ. ಭಾರತದಲ್ಲಿ ಹೆಣ್ಣು ಮಕ್ಕಳ ಕಲಿಕೆಗೆ ಸಾಕಷ್ಟು ಪ್ರೋತ್ಸಾಹವಿಲ್ಲ. ಹೆಣ್ಣು ಮಕ್ಕಳ ಬಗೆಗಿನ ದೃಷ್ಟಿಕೋನ ಬದಲಾಗಬೇಕು. ಎಲ್ಲರೂ ಒಳ್ಳೆಯ. ವಿದ್ಯಾಭ್ಯಾಸವನ್ನು ಕಲಿತು ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

ಶಿವಮೊಗ್ಗದ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ಅವರು ಮಾತನಾಡುತ್ತಾ, ಇಂದು ನಾವು ಅರ್ಥಪೂರ್ಣವಾಗಿ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಮಹಿಳಾ ದಿನಾಚರಣೆಯ ಈ ಸಂದರ್ಭದಲ್ಲಿ ಭಾಗಿಯಾಗಿ ಸಂತೋಷವಾಗಿದೆ. ಸಮಾಜದಲ್ಲಿರುವ ಕೆಳ ವರ್ಗದ ಮಹಿಳೆಯರು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸುತ್ತೇನೆ ಎಂದರು.
ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದ ಖ್ಯಾತ ಗಮಕಿ ವಾಚಕರಾದ ವಿದ್ವಾನ್ ಪದ್ಮಶ್ರೀ ಎಚ್.ಆರ್. ಕೇಶವಮೂರ್ತಿಯವರು ಗಮಕಿ ವಾಚನ ಮಾಡಿದರು. ಹಾಗೂ ಎಲ್ಲ ಮಹಿಳೆಯರಿಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು. ಎಲ್ಲರಿಗೂ ದೇವರು ಒಳ್ಳೆಯದು ಮಾಡಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ನ ಹೆಣ್ಣೆಂಬುದೇ ಹೆಮ್ಮೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಹರಟೆ, ಹಾಸ್ಯ ಭಾಷಣ ಗಾರರು ಹಾಗೂ ಸಾಹಿತಿಗಳಾದ ಶ್ರೀಮತಿ ಇಂದುಮತಿ ಸಾಲಿಮಠ ಅವರು ಹೆಣ್ಣು ಯಾರಿಗೂ ಕಡಿಮೆ ಇಲ್ಲ. ಇಂದು ಗಂಡಿಗೆ ಸಮಾನವಾಗಿ ಹೆಣ್ಣು ಕೂಡ ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾಳೆ. ಹಿಂದಿನ ಕಾಲದಲ್ಲಿ ಗಂಡು ಮಕ್ಕಳಾದರೆ ಪೇಡಾ ಹಂಚುತ್ತಿದ್ದರು. ಆದರೆ ಈಗ ಜಗತ್ತು ಬದಲಾಗುತ್ತಿದೆ. ಹೆಣ್ಣು ಗಂಡು ಎನ್ನುವ ಬೇಧವಿಲ್ಲದೆ ಮಕ್ಕಳನ್ನು ಒಂದಾಗಿ ಕಾಣಬೇಕು ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ವಿವಿಧ ಸರ್ಕಾರಿ ನೌಕರ ಸಂಘದ ಮಹಿಳೆಯರು ಹಾಗೂ ಮುಂತಾದವರು ಉಪಸ್ಥಿತರಿದ್ದರು.