Thursday, October 3, 2024
Thursday, October 3, 2024

ಸದೃಢ ಆರ್ಥಿಕತೆ , ಸುಸ್ಥಿರ ಅಭಿವೃದ್ಧಿಗೆ ಆಹಾರ ತಂತ್ರಜ್ಞಾನ ಮುಖ್ಯ -ಡಾ. ರವಿಶಂಕರ್ ಗೋಕರೆ

Date:

ಆಹಾರ ತಂತ್ರಜ್ಞಾನ ಹಾಗೂ ಕೃಷಿ ಅಧ್ಯಯನ ಒಂದಕ್ಕೊಂದು ಅವಲಂಬಿತವಾಗಿದೆ. ದೇಶದ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ವಿಶ್ವ ಬ್ಯಾಂಕ್ ನ ಅಂತರಾಷ್ಟ್ರೀಯ ಸಲಹೆಗಾರ ಡಾ. ರವಿಶಂಕರ್ ಗೋಕರೆ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಜೀವರಸಾಯನ ಶಾಸ್ತ್ರ ವಿಭಾಗದ ವತಿಯಿಂದ ಇತ್ತೀಚೆಗೆ ‌ಬಸವ ಭವನದಲ್ಲಿ‌ ‘ಜೀವರಸಾಯನ ಶಾಸ್ತ್ರ ಸಂಶೋಧನೆಯ ಇತ್ತೀಚಿನ ಪ್ರವೃತ್ತಿಗಳು’ ಕುರಿತು ಆಯೋಜಿಸಲಾಗಿದ್ದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಆಹಾರ ತಂತ್ರಜ್ಞಾನವು ಅನ್ವಯಿಕ ಶಾಸ್ತ್ರವಾಗಿದ್ದು, ದೇಶಕ್ಕೆ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಆಹಾರ ಸಂರಕ್ಷಣೆ, ಪೌಷ್ಟಿಕಾಂಶ ವೃದ್ಧಿ, ಮತ್ತು ನಿರ್ವಹಣೆಗೆ ಸಂಬಂಧಿಸಿದ ಸಂಶೋಧನೆಗಳ ಮೂಲಕ ಸುಸ್ಥಿರ ಅಭಿವೃದ್ಧಿಗೆ ಸಹಕಾರಿಯಾಗಲಿದೆ.‌

ಕುವೆಂಪು ವಿಶ್ವವಿದ್ಯಾಲಯದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಆಹಾರ ತಂತ್ರಜ್ಞಾನ ವಿಭಾಗವು ಈ ನಿಟ್ಟಿನಲ್ಲಿ ನುರಿತ ತಂತ್ರಜ್ಞರನ್ನು ತಯಾರು ಮಾಡುವತ್ತ ಕಾರ್ಯೋನ್ಮುಖವಾಗಲಿ ಎಂದು ಆಶಿಸಿದರು.

ಕುಲಪತಿ‌ ಪ್ರೊ.‌ ಬಿ. ಪಿ. ವೀರಭದ್ರಪ್ಪ ಮಾತನಾಡಿ, ದೇಶದಲ್ಲಿ ವ್ಯವಸಾಯಕ್ಕೆ ಬಳಕೆಯಾಗದ ಅನುಪಯುಕ್ತ ಭೂಮಿಯ ಪ್ರಮಾಣವು ಹೆಚ್ಚಾಗಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವ ನಿಟ್ಟಿನಲ್ಲಿ ಆಹಾರ ತಂತ್ರಜ್ಞಾನ ಸಂಶೋಧನೆಗಳ ಮೇಲಿನ ನೀರಿಕ್ಷೆ ಹೆಚ್ಚಾಗಿದೆ ಎಂದು ಹೇಳಿದರು.

ಮೈಸೂರು ವಿಶ್ವವಿದ್ಯಾಲಯದ ಪ್ರೊ. ಮಧುಸೂದನ, ಡಾ. ರಮಾನಂದ್ ನಾಡಿಗ, ಮಂಗಳೂರು ವಿವಿಯ ಪ್ರೊ. ಮಂಜುನಾಥ್ ಹಾಗೂ ಪ್ರೊ. ಗೋಪಾಲ್ ಮರಾಠೆ ಮಾತನಾಡಿದರು.

ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಪ್ರಾರಂಭಿಸಲಾಗಿರುವ ಸ್ನಾತಕೋತ್ತರ ಆಹಾರ ತಂತ್ರಜ್ಞಾನ ವಿಭಾಗವನ್ನು ಈ ಸಂದರ್ಭದಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಯಿತು.

ಕುಲಸಚಿವೆ ಜಿ.‌ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ.‌ಎಸ್. ಕೆ. ನವೀನ್ ಕುಮಾರ್, ಜೀವರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ನೀಲಗುಂದ್, ಪ್ರೊ. ನಿರಂಜನ್, ಪ್ರೊ. ತಿಪ್ಪೇಸ್ವಾಮಿ, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...