Thursday, December 18, 2025
Thursday, December 18, 2025

ರಿಸರ್ವ್ ಬ್ಯಾಂಕ್ ರೆಪೋ ದರ ಬದಲಾವಣೆಯಿಲ್ಲ

Date:

ಭಾರತೀಯ ರಿಸರ್ವ್ ಬ್ಯಾಂಕ್‌ ರೆಪೊ ದರದಲ್ಲಿ ಬದಲಾವಣೆ ಮಾಡದಿರಲು ಶುಕ್ರವಾರ ನಿರ್ಧರಿಸಿದೆ. ಶೇ. 4ರಷ್ಟು ರೆಪೊ ದರ ಮುಂದುವರಿಯಲಿದೆ. ರಿವರ್ಸ್‌ ರೆಪೊ ದರದಲ್ಲೂ ಯಥಾಸ್ಥಿತಿ ಶೇ. 3.35 ಕಾಯ್ದುಕೊಳ್ಳಲು ತೀರ್ಮಾನಿಸಲಾಗಿದೆ.

2022-23ನೇ ಸಾಲಿನ ಮೊದಲ ದ್ವೈ ಮಾಸಿಕ ಹಣಕಾಸು ನೀತಿ ಸಭೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳನ್ನು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಪ್ರಕಟಿಸಿದರು.

ಸತತ 11ನೇ ಬಾರಿಗೆ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಇದರಿಂದಾಗಿ ಗೃಹಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಬಡ್ಡಿದರದಲ್ಲಿ ಬದಲಾವಣೆಗಳು ಆಗುವ ಸಾಧ್ಯತೆ ಇಲ್ಲ.

ರಷ್ಯಾ-ಉಕ್ರೇನ್‌ ಸಂಘರ್ಷ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಯ ಕಾರಣಗಳಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಚಿಲ್ಲರೆ ಹಣದುಬ್ಬರವು ಶೇ. 5.7ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ. ದೇಶದಲ್ಲಿ ಹಣದುಬ್ಬರವು ಶೇ. 4.5ರಷ್ಟಿರಲಿದೆ ಎಂದು ಫೆಬ್ರುವರಿ ತಿಂಗಳಲ್ಲಿ ಅಂದಾಜಿಸಲಾಗಿತ್ತು.

ಈ ಹಣಕಾಸು ವರ್ಷದಲ್ಲಿ ಅರ್ಥ ವ್ಯವಸ್ಥೆಯ ಬೆಳವಣಿಗೆ ದರ ಶೇ. 7.2ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ. ಜಿಡಿಪಿ ಶೇ. 7.8ರಷ್ಟು ಇರಲಿದೆ ಎಂದು ಈ ಹಿಂದೆ ಅಂದಾಜಿಸಲಾಗಿತ್ತು.

ಯುರೋಪ್‌ ನ ಪರಿಸ್ಥಿತಿಯು ಜಾಗತಿಕ ಆರ್ಥಿಕತೆಯ ಹಳಿ ತಪ್ಪಿಸಬಹುದು ಎಂದು ಶಕ್ತಿಕಾಂತ್‌ ದಾಸ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಆರ್‌ಬಿಐ ಪ್ರಕಟಣೆಯ ಬೆನ್ನಲ್ಲೇ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 110 ಅಂಶ ಕಡಿಮೆಯಾಗಿ 58,927 ಅಂಶ ತಲುಪಿದರೆ, ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 17,628 ಅಂಶಗಳಲ್ಲಿ ವಹಿವಾಟು ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...