ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಚಂದ್ರು ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಯಾರ ಹೇಳಿಕೆಯೂ ಮುಖ್ಯವಲ್ಲ.ಸತ್ಯ ಹೊರಬರಬೇಕು. ಅದು ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಮತ್ತು ಡಿಐಜಿ ಜೊತೆ ಚರ್ಚೆ ಮಾಡಿದ್ದೇನೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲು ನಿರ್ಧರಿಸಿದ್ದೇವೆ. ನಿಸ್ಪಕ್ಷವಾದ ತನಿಖೆಯಾಗಲಿ, ಸತ್ಯ ಹೊರಬರಲಿ ಎಂದು ಹೇಳಿದ್ದಾರೆ.
ಮೂರು ತಂಡದಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದೇವೆ. ಕಾರ್ಯಕರ್ತರ, ಮುಖಂಡರ ಜೊತೆ ಸಭೆ ಮಾಡುತ್ತೇವೆ. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಜೊತೆಗಿರುತ್ತಾರೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.