ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಸಿದೆ.
ಬೆಂಗಳೂರು, ಮಂಗಳೂರು, ಮಂಡ್ಯ, ಮೈಸೂರು, ರಾಮನಗರ, ಹಾಸನ, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂಜಾನೆ ಇದ್ದು, ಮಧ್ಯಾಹ್ನದ ಸಮಯಕ್ಕೆ ಬಿಸಿಲಿನ ತಾಪ ಏರಿಕೆಯಾಗಲಿದೆ.
ಶಿವಮೊಗ್ಗ, ಬೆಳಗಾವಿ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.