ವಸತಿ ರಹಿತ ಬಡಜನರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯ ಸರಕಾರ 3 ಲಕ್ಷ ಮನೆಗಳನ್ನು ನಿರ್ಮಿಸಲಾಗುತ್ತದೆ ಎಂದು ವಸತಿ ಸಚಿವ ವಿ. ಸೋಮಣ್ಣ ಅವರು ತಿಳಿಸಿದ್ದಾರೆ.
ಬೆಂಗಳೂರಿನ ವಿವಿ ಪುರಂನಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಳಚೆ ಪ್ರದೇಶ ಅಭಿವೃದ್ದಿ ಮಂಡಳಿಯಿಂದ 1.8 ಲಕ್ಷ ಮನೆಗಳು ಮತ್ತು ರಾಜೀವ್ ಗಾಂಧೀ ಆವಾಸ್ ವಸತಿ ಯೋಜನೆಯಡಿ 1.20 ಲಕ್ಷ ಮನೆಗಳು ಸೇರಿದಂತೆ ಒಟ್ಟು 3 ಲಕ್ಷ ಮನೆ ನಿರ್ಮಿಸಿ ವಸತಿ ರಹಿತ ಬಡಜನರಿಗೆ ವಿತರಿಸಲಾಗುತ್ತದೆ ಎಂದು ಹೇಳಿದ್ದಾರೆ.
ನಗರ ಪ್ರದೇಶದಲ್ಲಿರುವ ಬಡವರಿಗೆ ಈಗಾಗಲೇ 1.20 ಲಕ್ಷ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಮುಂದಿನ ದಿನಗಳಲ್ಲಿ 1.8 ಲಕ್ಷ ಮನೆಗಳನ್ನು ಸೂರಿಲ್ಲದ ಬಡವರಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ವಿ. ಸೋಮಣ್ಣ ಅವರು ಹೇಳಿದ್ದಾರೆ.