ಉಕ್ರೇನ್‌ನ ಮೇಲೆ ರಷ್ಯಾ ಸೇನಾ ಕಾರ್ಯಾಚರಣೆ ಶುರು ಮಾಡಿ 50 ದಿನಗಳೇ ಕಳೆದು ಹೋಗಿದೆ. ಇದರ ಮಧ್ಯೆ ಉಕ್ರೇನ್ ಸೇನೆಗೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ನೀಡಿರುವ ಒಂದೇ ಒಂದು ಭರವಸೆಯು ಆನೆಬಲವನ್ನು ನೀಡಿದೆ.
ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯುಎಸ್ ನೆರವು ನೀಡಲಿದೆ ಎಂದು ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.
ಉಕ್ರೇನ್‌ಗೆ ಹೆಚ್ಚಿನ ಬೆಂಬಲವನ್ನು ನೀಡುವ ನಿಟ್ಟಿನಲ್ಲಿ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅನ್ನು ಭೇಟಿ ಮಾಡುವುದಕ್ಕೆ ಯುಎಸ್ ಉನ್ನತ ಮಟ್ಟದ ಅಧಿಕಾರಿಯೊಬ್ಬರನ್ನು ಕಳುಹಿಸಲು ಯೋಜನೆ ಹಾಕಿಕೊಂಡಿದೆ. ಸದ್ಯ ಯುಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ದೇಶವನ್ನು ಪ್ರತಿನಿಧಿಸುವ ಪ್ರತಿನಿಧಿಗಳಾಗಿದ್ದಾರೆ.
ಆದರೆ ಇವರ ಬದಲಿಗೆ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅಥವಾ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರಂತಹ ಅಧಿಕಾರಿಗಳು ಕೀವ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ.
ಹೊಸ ಹೂವಿಟ್ಜರ್ ಮತ್ತು ಹೆಲಿಕಾಪ್ಟರ್ ಸೇರಿದಂತೆ ಭಾರಿ ಪ್ರಮಾಣದ ಸೇನಾ ಶಸ್ತ್ರಾಸ್ತ್ರಗಳನ್ನು ಉಕ್ರೇನ್‌ಗೆ ನೀಡುವುದಾಗಿ ಅವರು ಹೇಳಿದ್ದಾರೆ.