Sunday, November 24, 2024
Sunday, November 24, 2024

ಏಪ್ರಿಲ್ 18 ರ ತನಕ ಶಿವಮೊಗ್ಗ ಜಿಲ್ಲೆಯಲ್ಲಿ ವರುಣನಾರ್ಭಟ

Date:

ಕರ್ನಾಟಕದ ಕರಾವಳಿ ಸೇರಿದಂತೆ ಕೆಲವು ಕಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಸಂಜೆಯೂ ಜೋರಾಗಿ ಮಳೆಯಾಗಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಭಾರೀ ಮಳೆಯಿಂದ ತುಮಕೂರು, ಚಾಮರಾಜನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ಬಿರುಗಾಳಿಗೆ ಹಲವೆಡೆ ಚಾವಣಿಗೆ ಅಳವಡಿಸಿದ್ದ ತಗಡಿನ ಶೀಟುಗಳು ಹಾರಿಹೋಗಿವೆ. ಸಿಡಿಲು ಬಡಿದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ತಮಿಳುನಾಡು ತೀರ ಪ್ರದೇಶದಲ್ಲಿ ಸೃಷ್ಟಿಯಾಗಿರುವ ಸೈಕ್ಲೋನ್‌ ಪ್ರಭಾವದಿಂದಾಗಿ ಕರ್ನಾಟಕದ ಕರಾವಳಿ ಹಾಗೂ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕರ್ನಾಟಕದಲ್ಲಿ ಪೂರ್ವ ಮುಂಗಾರು ತುಸು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ ಸೇರಿದಂತೆ ಕೆಲವು ಕಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಕೆಲವು ಕಡೆ ಏ.18ರವರೆಗೆ ಮಳೆಯಾಗುವ ಸಂಭವವಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ತುಮಕೂರಿನ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನಗಳು ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಮಂಡ್ಯ, ಮೈಸೂರು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ಸೇರಿದಂತೆ ಮಂಗಳೂರು ನಗರದಲ್ಲೂ ಭಾರೀ ಮಳೆಯಾಗಿದೆ. ಭಾರೀ ಗಾಳಿ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ವಿದ್ಯುತ್ ಕಂಬ ರಸ್ತೆಗೆ ಬಿದ್ದಿದೆ. ಬಂಗಾಳ ಕೊಲ್ಲಿಯಿಂದ ಈಶಾನ್ಯ ರಾಜ್ಯಗಳಿಗೆ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಬಲವಾದ ನೈಋತ್ಯ ಮಾರುತಗಳ ಪ್ರಭಾವದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆಯು ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ‘ಆರೆಂಜ್ ಅಲರ್ಟ್​’ ನೀಡಿದೆ.

ಏ. 16ರವರೆಗೆ ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ತಮಿಳುನಾಡಿನಲ್ಲಿ ಚಂಡಮಾರುತದ ಚಲನೆ ಉಂಟಾಗಲಿದೆ. ಮುಂದಿನ 4 ದಿನಗಳಲ್ಲಿ ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಅಥವಾ ಮಿಂಚಿನ ಜೊತೆಗೆ ವ್ಯಾಪಕವಾದ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಆಂಧ್ರಪ್ರದೇಶದ ಕರಾವಳಿಯಲ್ಲೂ ಮಳೆಯಾಗಲಿದೆ.

ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳದಲ್ಲಿ ವಿಪರೀತ ಮಳೆಯಾಗಲಿದೆ.
ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಿಕ್ಕಿಂ ಮತ್ತು ಕೇರಳದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Priyanka Gandhi ಕೇರಳ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅತ್ಯಧಿಕ ಮತಗಳಿಂದ ಆಯ್ಕೆ

Priyanka Gandhi ಪ್ರಿಯಾಂಕಾ ಗಾಂಧಿ ವಾದ್ರಾ 4,10,931 ಮತಗಳ ಅಂತರದಿಂದ ಗೆದ್ದಿದ್ದಾರೆ,...

SP Mithun Kumar ಮದ್ಯವರ್ಜನ ಶಿಬಿರ ಚಾಲನೆ, ಸಮಾಜಕ್ಕೆ ಹೆಚ್ಚು ಉಪಯುಕ್ತ- ಎಸ್.ಪಿ .ಮಿಥುನ್ ಕುಮಾರ್

SP Mithun Kumar ಶಿವಮೊಗ್ಗ,ನ.22 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

Kuvempu Birthday ಕುವೆಂಪು ಜನ್ಮದಿನದ ವಿಶೇಷ ಷಿಕಾರಿಪುರದಲ್ಲಿ ನಾಟಕ ಸ್ಪರ್ಧೆ

Kuvempu Birthday ಸಹ್ಯಾದ್ರಿ ರಂಗತರಂಗ ನಾಟಕ ಸ್ಪರ್ಧೆ ಶಿವಮೊಗ್ಗ ನಗರದ ಸಹಾದ್ರಿ...

Dargah Shah Aleem Deewan ಶಿವಮೊಗ್ಗದ ದಿವಾನ್ ಭಾಬಾ ದರ್ಗಾದಲ್ಲಿ ನ.24 ರಿಂದ 26 ವರೆಗೆ ಉರುಸ್

Dargah Shah Aleem Deewan ಶಿವಮೊಗ್ಗದ ಹಜ್ರತ್ ಸೈಯದ್ ಶಾ ಅಲೀಮ್...