ಬಿಪಿಎಲ್ ಕಾರ್ಡ್ ಅರ್ಹರಲ್ಲ ದವರು ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿದ್ದರೆ ಅಂಥವರ ವಿರುದ್ದ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು
ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅರ್ಹ ಫಲಾನುಭವಿಗಳಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದೆ. ಇದನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಬಡವರಿಗೋಸ್ಕರ ಇರುವ ಬಿಪಿಎಲ್ ಕಾರ್ಡ್ ದನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಈಗಾಗಲೇ ಹಲವಾರು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದು ಸರಿಯಾಗಿ ಪರಿಶೀಲಿಸಿದ ನಂತರ ಆ ಕಾರ್ಡ್ ಗಳನ್ನು ರದ್ದು ಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈಗಾಗಲೇ 2.ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದರು.
ಬಡವರಿಗೋಸ್ಕರ ಇರುವ ಯೋಜನೆಯನ್ನು ಇತರರು ಪಡೆಯಬಾರದು.
ಸ್ವಂತ ಮನೆ ಹೊಂದಿ 2-3 ಮಹಡಿಯ ಮನೆ ಕಟ್ಟಿಕೊಂಡುರುವವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ. ಬಿಪಿಎಲ್ ಕಾರ್ಡ್ ಗಾಗಿ ಹೊಸ ಕಾನೂನು ಜಾರಿಗೊಳಿಸಲಾಗುತ್ತಿದ್ದು ಇದರ ದುರ್ಬಳಕೆ ತಡೆಯಲು ಈ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ ಕೇಂದ್ರ ಸರ್ಕಾರ ದೇಶದಲ್ಲಿ ಎಂಬತ್ತು ಕೋಟಿ ಜನರಿಗೆ ಬಿಪಿಎಲ್ ಕಾರ್ಡ್ ಮುಖಾಂತರ ಆಹಾರ ಒದಗಿಸುತ್ತಿದೆ ಎಂದರು.
ಕೇಂದ್ರ ಸರ್ಕಾರದ ಜತೆಗೆ ರಾಜ್ಯ ಸರ್ಕಾರವೂ ಸಹ ಕೈಜೋಡಿಸಿ ಅಂತ್ಯೋದಯ ಕಾರ್ಡ್ ಗೆ ತಲಾ ಹತ್ತು ಕೆಜಿ ಅಕ್ಕಿ ನೀಡಲಾಗುತ್ತಿದೆ ಎಂದು ತಿಳಿಸಿದರು.