ಇಂದು ಹನುಮ ಜಯಂತಿ ಪ್ರಯುಕ್ತ ಶಿವಮೊಗ್ಗದ ಕೋಟೆ ಶ್ರೀಆಂಜನೇಯಸ್ವಾಮಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು .
ಹಬ್ಬಗಳ ನಾಡು ಈ ದೇಶದಲ್ಲಿ ನಾವು ಹಲವಾರು ಹಬ್ಬಗಳನ್ನು ಆಚರಿಸುತ್ತೇವೆ ಹಿಂದುಗಳು ಆಚರಿಸುವ ಹಬ್ಬಗಳಲ್ಲಿ ಹನುಮ ಜಯಂತಿ ಕೂಡ ಒಂದು. ಈ ದಿನದಂದು ಹನುಮಂತನಿಗೆ ವಿಶೇಷವಾದ ಪೂಜೆಯನ್ನು ಮಾಡಲಾಗುತ್ತದೆ.
ಅದೇ ರೀತಿ ದೇಶದ ವಿಧ ಕಡೆಯಲ್ಲಿ ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಶಿವಮೊಗ್ಗ ನಗರದ ಪ್ರಮುಖ ದೇವಾಲಯಗಳಲ್ಲಿ ಒಂದಾದಂತಹ ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮನಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು . ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ದೇವರ ದರ್ಶನ ಮಾಡಿ ಪಾವನ ರಾಗಿದ್ದಾರೆ. ಹಾಗೂ ಹನುಮಂತನಿಗೆ ಮೊಸರನ್ನ ಮತ್ತು ಪುಳಿಯೋಗರೆ ನೈವೇದ್ಯಮಾಡಿ ಭಕ್ತಾದಿಗಳಿಗೆ ವಿತರಿಸಲಾಯಿತು.
ಇದೇ ದಿನ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾದರು.