Friday, December 5, 2025
Friday, December 5, 2025

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ವಿಜಯನಗರದಲ್ಲಿ ಆರಂಭ

Date:

ವಿಜಯನಗರ ಹೂಸಪೇಟೆ ನಗರದ ಭಟ್ರಹಳ್ಳಿ ಆಂಜನೇಯ ದೇವಸ್ಥಾನದ ಸಮೀಪ ನಿರ್ಮಿಸಿರುವ ಭವ್ಯ ವೇದಿಕೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ, ಗೋ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಮತ್ತು ಬಿಜೆಪಿ ಬಾವುಟ ಹಾರಿಸುವುದರೊಂದಿಗೆ ಆರಂಭಗೊಂಡಿದೆ.

ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಳಿನ್ ಕುಮಾರ್ ಕಟೀಲ್ ಅವರು ಧ್ವಜಾರೋಹಣ ನಡೆಸಿದರು.ಇಂದು ಮತ್ತು ನಾಳೆ ಎರಡು ದಿನ ಬಿಜೆಪಿಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಮಾನ್ಯಶ್ರೀ ಬಸವರಾಜ ಬೊಮ್ಮಾಯಿ ದೀಪ ಬೆಳಗಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶನಿವಾರ ಹಾಗೂ ಭಾನುವಾರ ಈ ಬಿಜೆಪಿ ಹೈವೋಲ್ಟೇಜ್‌ ಕಾರ್ಯಕಾರಣಿ ನಡೆಯುತ್ತದೆ.

ಹೊಸಪೇಟೆಯಲ್ಲಿ ಎರಡು ದಿನ ಮಹತ್ವದ ಬೈಠಕ್‌ ನಡೆಯಲಿದೆ. ಈ ಸಂದರ್ಭದಲ್ಲಿ ಚುನಾವಣೆ ಸಿದ್ಧತೆ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪಕ್ಷದ ಬಲವರ್ಧನೆ ಬಗ್ಗೆಯೂ ಸಮಾಲೋಚನೆ ನಡೆಯಲಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ನಡ್ಡಾ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ.

ಕಾರ್ಯಕ್ರಮದ ವೇದಿಕೆ ಮೇಲೆ, ಮುಖ್ಯಮಂತ್ರಿ ಬೊಮ್ಮಾಯಿ, ಪಕ್ಷದ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಮುಜರಾಯಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಇನ್ನೂ ಹಲವು ಗಣ್ಯರು ಉಪಸ್ಥಿತರಿದ್ದರು.
ಕಾಂಗ್ರೆಸ್ ಓಲೈಕೆ ರಾಜಕಾರಣ, ಹಿಂದು ವಿರೋ ನಿಲುವನ್ನು ಬಿಂಬಿಸಿ ಮುನ್ನಲೆಗೆ ತರುವ ನಿಟ್ಟಿನಲ್ಲಿ ಕಾರ್ಯಾಕಾರಿಣಿ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಪ್ರಮುಖವಾಗಿ ಕಮಿಷನ್ ವಿಚಾರ, ಈಶ್ವರಪ್ಪ ರಾಜೀನಾಮೆ ಸಂಬಂಧ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯೂ ಇದೆ. 40 ಪರ್ಸೆಂಟ್ ಕಮೀಷನ್ ಆರೋಪಕ್ಕೆ ಈಶ್ವರಪ್ಪ ತುತ್ತಾಗಿರುವ ಬೆನ್ನಲ್ಲೇ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಜನಾದೇಶ ಪಡೆಯುವ ಹೆಗ್ಗುರಿಯೊಂದಿಗೆ ಬಿಜೆಪಿ ಕಾರ್ಯಕಾರಿಣಿ ಸಭೆ ನಿನ್ನೆಯಿಂದ ಆರಂಭಗೊಂಡಿದೆ. ನೂತನ ಜಿಲ್ಲೆಯಾದ ನಂತರ ಇದೇ ಮೊದಲ ಬಾರಿಗೆ ವಿಜಯನಗರದ ಹೊಸಪೇಟೆಯ ಆಂಜನೇಯ ಭಟ್ಟರಹಳ್ಳಿ ಸಮೀಪ ನಿನ್ನೆ ಬೆಳಿಗ್ಗೆ 10 ಗಂಟೆಗೆ ಸಭೆ ಆರಂಭವಾಯಿತು. ವೇದಿಕೆಯ ಹತ್ತಿರ ಕಾಂಗ್ರೇಸ್ ಪಕ್ಷದ ನಾಯಕರು ಈಶ್ವರಪ್ಪ ರವರನ್ನು ಬಂಧಿಸುವಂತೆ ಒಂದು ಗುಂಪು ಹೂರಾಟ ನಡೆಸಿದರು.

ಇಂದು ಸಮಾರೋಪ ಸಮಾರಂಭಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇರಲಿದೆ. ಸಭೆಯಲ್ಲಿ ಮುಖ್ಯವಾಗಿ ಪಕ್ಷ ಸಂಘಟನೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಲಿದೆ.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜೀನಾಮೆ ನೀಡಿರುವ ಕೆ.ಎಸ್. ಈಶ್ವರಪ್ಪ ಬಿಜೆಪಿ ಕಾರ್ಯಕಾರಿಣಿ ಸಭೆಯಿಂದ ದೂರು ಉಳಿದಿದ್ದಾರೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೆ.ಎಸ್. ಈಶ್ವರಪ್ಪ ರಾಜ್ಯ ಕಾರ್ಯಕಾರಿಣಿ ಸಭೆಗೆ ನಿನ್ನೆ ಸಭೆಗೆ ಗೈರಾಗಿದ್ದರು.
ಜೊತೆಗೆ ಸಾಕಷ್ಟು ಕುತೂಹಲ ಮೂಡಿಸಿರುವ ಸಂಪುಟ ಪುನಾರಚನೆ ಕಸರತ್ತು ಹಾಗೂ ನಿಗಮ ಮಂಡಳಿಗಳ ನೇಮಕ ಕುರಿತಂತೆಯೂ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ. ಈಶ್ವರಪ್ಪ ರಾಜೀನಾಮೆ ಸಂಬಂಧ ಏನೇನೆಲ್ಲ ನಡೆದಿದೆ ಎಂಬುದರ ಕುರಿತು ಸಂಪೂರ್ಣ ವರದಿಯನ್ನ ಜೆಪಿ ನಡ್ಡಾರವರಿಗೆ ನೀಡಲಿದ್ದಾರೆ. ಇದಾದ ಬಳಿಕ ಇದನ್ನ ಕಾಂಗ್ರೆಸ್‍ನಿಂದ ದೂರ ಮಾಡಲು ಯಾವ ರೀತಿ ತಂತ್ರಗಾರಿಕೆ ಮಾಡಬೇಕು ಎಂಬುದರ ಕುರಿತು ಕೋರ್ ಕಮಿಟಿ ಸದಸ್ಯರ ಸಮ್ಮುಖದಲ್ಲಿ ನಡ್ಡಾ ಮಾತುಕತೆ ನಡೆಸಲಿದ್ದಾರೆ.

ವರದಿ: ಮುರಳೀಧರ ನಾಡಿಗೇರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...