Thursday, October 3, 2024
Thursday, October 3, 2024

ಏಪ್ರಿಲ್ 18 ರಿಂದ 30 ರವರೆಗೆ ತಾಲ್ಲೂಕು ಮಟ್ಟದ ಆರೋಗ್ಯ ಮೇಳ

Date:

ಆರೋಗ್ಯ ಕಾರ್ಯಕ್ರಮಗಳು, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ದೊರೆಯುವ ಸೇವೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು.ಮತ್ತು ಮಾಹಿತಿ ಹಾಗೂ ಶಿಕ್ಷಣ ನೀಡುವ ಉದ್ದೇಶದಿಂದ ಏ.18 ರಿಂದ 30 ರವರೆಗೆ ತಾಲ್ಲೂಕು ಮಟ್ಟದಲ್ಲಿ ಆಯೋಜಿಸಲಾಗಿರುವ ಒಂದು ದಿನದ ಬೃಹತ್ ಆರೋಗ್ಯ ಮೇಳವನ್ನು ಯಶಸ್ವಿಗೊಳಿಸಲು ಅಗತ್ಯವಾದ ಎಲ್ಲ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿ.ಪಂ.ಸಿಇಓ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಾಲ್ಲೂಕು ಮಟ್ಟದಲ್ಲಿ ತಜ್ಞ ವೈದ್ಯರಿಂದ ಬೃಹತ್ ಆರೋಗ್ಯ ಮೇಳವನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸುವ ಸಂಬಂಧ ಜಿ.ಪಂ ಸಭಾಂಗಣದಲ್ಲಿ ವೈದ್ಯರು ಮತ್ತು ಇತರೆ ಅಧಿಕಾರಿಗಳಿಗೆ ಕರೆಯಲಾಗಿದ್ದ ಜಿಲ್ಲಾ ಮಟ್ಟದ ಯೋಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ದೊರೆಯುವ ಇತರೆ ಸೇವೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೃಹತ್ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಏ.18 ರ ಬೆಳಿಗ್ಗೆ 9 ರಿಂದ 04 ರವರೆಗೆ ಬೃಹತ್ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ. ಮತ್ತು ಏ. 22 ರಂದು ಭದ್ರಾವತಿ, ಏ. 25 ರಂದು ಶಿಕಾರಿಪುರ, ಏ. 26 ರಂದು ತೀರ್ಥಹಳ್ಳಿ, ಏ. 27ರಂದು ಹೊಸನಗರ, ಏ. 28 ರಂದು ಹೊಸನಗರ ಹಾಗೂ ಏ.30 ರಂದು ಸಾಗರದಲ್ಲಿ ಬೃಹತ್ ಆರೋಗ್ಯ ಮೇಳ ನಡೆಸಬೇಕೆಂದು ನಿರ್ಧರಿಸಲಾಗಿದೆ. ಎಲ್ಲ ತಾಲ್ಲೂಕು ವೈದ್ಯಾಧಿಕಾರಿಗಳು, ಇತರೆ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆರೋಗ್ಯದ ವಿವಿಧ ಯೋಜನೆಗಳ ಅಧಿಕಾರಿಗಳು, ಕಾರ್ಯಕ್ರಮಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಮೇಳಕ್ಕೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.

ಆರೋಗ್ಯ ಮೇಳದ ಪ್ರವೇಶದಿಂದ ಹಿಡಿದು ನಿರ್ಗಮನದ ವರೆಗೆ ಸಕಲ ಸಿದ್ದತೆ ಉತ್ತಮವಾಗಿ ಆಗಬೇಕು. ತಪಾಸಣೆಗೆ ಬರುವವರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ, ಕೂರಲು ಆಸನದ ವ್ಯವಸ್ಥೆ ಹಾಗೂ ಕೇಂದ್ರ ಮತ್ತು ರಾಜ್ಯ ಆರೋಗ್ಯ ಯೋಜನೆಗಳ ವಿವರ ಹಾಗೂ ಟೈಅಪ್ ಆಗಿರುವ ಆಸ್ಪತ್ರೆಗಳ ವಿವರವನ್ನು ಪ್ರದರ್ಶಿಸಬೇಕು. ಸಾರ್ವಜನಿಕರ ಮಾಹಿತಿಗಾಗಿ ಮೇಳದ ಕುರಿತಾದ ಮಾಹಿತಿ ಹಾಗೂ ವಿವಿಧ ಕೌಂಟರ್ ಗಳ ಬಗ್ಗೆ ಮಾಹಿತಿ ನೀಡುವ ಸೂಚನಾ ಫಲಕಗಳನ್ನು ಅಳವಡಿಸಬೇಕು. ಮತ್ತು ವಿವಿಧ ಆಸ್ಪತೆಗಳು, ಸ್ಥಳೀಯ ಸಂಸ್ಥೆಗಳು ಹಾಗೂ ರೆಡ್‍ಕ್ರಾಸ್, ರೋಟರಿಯಂತಹ ಸಂಸ್ಥೆಗಳ ಸ್ವಯಂ ಸೇವಕರ ಸಹಕಾರವನ್ನು ಸಹ ಪಡೆಯಬೇಕೆಂದು ಸೂಚಿಸಿದ್ದಾರೆ.

ಮೇಳದಲ್ಲಿ ಎಲ್ಲ ಅಧಿಕಾರಿ ಅಥವಾ ಸಿಬ್ಬಂದಿಗಳು ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ತಪಾಸಣೆಗಾಗಿ ಬರುವವರನ್ನು ನೋಂದಣಿ ಮಾಡಿಸಿಕೊಂಡು, ಎಬಿಎಆರ್‍ಕೆ ಕಾರ್ಡ್ ಬಗ್ಗೆ ಮಾಹಿತಿ ನೀಡುವುದು, ತಪಾಸಣೆ ನಡೆಸುವುದು. ಲಭ್ಯವಿರುವ ಚಿಕಿತ್ಸೆ, ಆರೋಗ್ಯ ಸೇವೆಗಳ ಬಗ್ಗೆ ತಿಳಿಸುವುದು. ಆಪ್ತ ಸಮಾಲೋಚನೆ, ಪಥ್ಯ, ಸೇರಿದಂತೆ ಇತರೆ ಚಟುವಟಿಕೆಗಳನ್ನು ಕೈಗೊಂಡು ರೋಗಿಗಳಿಗೆ ನಿರಾಯಾಸವಾಗಿ ಉತ್ತಮ ಚಿಕಿತ್ಸೆ ಪಡೆಯಲು ಸಹಕರಿಸಬೇಕು. ಹಾಗೂ ಅವಶ್ಯಕವಾದ ಎಲ್ಲ ಔಷಧಿಗಳು, ಫಾರ್ಮಾಸಿಸ್ಟ್, ಪ್ರಯೋಗಶಾಲಾ ತಂತ್ರಜ್ಞರು ಲಭ್ಯವಿರಬೇಕು, ಎಬಿಎಆರ್‍ಕೆ ಇತರೆ ಆರೋಗ್ಯ ಸೇವೆ ಮಾಹಿತಿ ನೀಡಬೇಕು, ಎಬಿಎಆರ್‍ಕೆ ಕಾರ್ಡ್ ಇಲ್ಲದವರಿಗೆ ಕಾರ್ಡ್ ವಿತರಣೆ, ಅಸಾಂಕ್ರಾಮಿಕ ಮತ್ತು ಸಾಂಕ್ರಾಮಿಕ ರೋಗಗಳಿಗೆ ಉಚಿತ ಸಲಹೆ ಹಾಗೂ ಚಿಕಿತ್ಸಾ ಸೌಲಭ್ಯವನ್ನು ನೀಡಬೇಕು ಎಂದು ತಿಳಿಸಿದ್ದಾರೆ.

ವಿವಿಧ ಇಲಾಖೆಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ತಂಡ, ತಾಲ್ಲೂಕು ವೈದ್ಯಾಧಿಕಾರಿಗಳು, ಇತರೆ ವೈದ್ಯಾಧಿಕಾರಗಳು, ಸಮುದಾಯ ಆರೋಗ್ಯಾಧಿಕಾರಿಗಳು, ಫಾರ್ಮಾಸಿಸ್ಟ್, ಪ್ರಯೋಗಶಾಲಾ ತಂತ್ರಜ್ಞರು, ಆಯುಷ್ ಇಲಾಖೆಯ ಯೋಗ ಮಾರ್ಗದರ್ಶಕರು ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಸಾರ್ವಜನಿಕರು ತಮಗೆ ಅಗತ್ಯವಾದ ಆರೋಗ್ಯ ಸೇವೆ ಪಡೆಯಲು ಸಹಕರಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ,ಮೇಳದಲ್ಲಿ ಎಲ್ಲಾ ಖಾಯಿಲೆಗಳಿಗೆ ಉಚಿತವಾಗಿ ವೈದ್ಯಕೀಯ ತಪಾಸಣೆ, ವೈದ್ಯರ ಸಲಹೆ ಮೇರೆಗೆ ಉಚಿತ ಔಷಧಿ ವಿತರಣೆ, ಅಗತ್ಯವಿರುವವರಿಗೆ ಪ್ರಯೋಗಶಾಲಾ ಪರೀಕ್ಷೆಗಳು, ಅಧಿಕ ರಕ್ತದೊತ್ತಡ, ಮಧುಮೇಹ, ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್‍ನ ಪೂರ್ವಭಾವಿ ತಪಾಸಣೆ, ಕ್ಷಯರೋಗ ಮತ್ತು ಇತರೆ ಸಾಂಕ್ರಾಮಿಕ ರೋಗಗಳಿಗೆ ಉಚಿತ ಸಲಹೆ ಮತ್ತು ಚಿಕಿತ್ಸೆ ನೀಡಲಾಗುವುದು. ಜೊತೆಗೆ ಸರ್ಕಾರದಿಂದ ಲಭ್ಯವಾಗುವ ಆರೋಗ್ಯ ಸೇವೆಗಳ ಮಾಹಿತಿ, ಎಬಿಎಆರ್‍ಕೆ ಕಾರ್ಡ್ ವಿತರಣೆ, ಡಿಜಿಟಲ್ ಐಡಿ ಸೃಷ್ಟಿಸಿಕೊಡಲಾಗುವುದು.
ಲಭ್ಯವಿರುವ ತಜ್ಞ ವೈದ್ಯರು ಮತ್ತು ಸೇವೆ: ವೈದ್ಯಕೀಯ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಕೀಲು ಮೂಳೆ ತಜ್ಞರು, ಚರ್ಮ ಮತ್ತು ಲೈಂಗಿಕ ರೋಗ ತಜ್ಞರು, ಕಿವಿ, ಮೂಗು ಮತ್ತು ಗಂಟಲು ತಜ್ಞರು, ಕಣ್ಣಿನ ತಜ್ಞರು, ದಂತ ತಜ್ಞರು, ಮಾನಸಿಕ ರೋಗ ತಜ್ಞರು, ಆಯುರ್ವೇದ ತಜ್ಞರು, ಹೆಚ್‍ಐವಿ ಆಪ್ತಸಮಾಲೋಚನೆ ಮತ್ತು ಪರೀಕ್ಷೆ, ಹದಿಹರೆಯದವರಿಗೆ ಆಪ್ತ ಸಮಾಲೋಚನೆ, ಪೌಷ್ಟಿಕ ಆಹಾರ ತಯಾರಿ ಪ್ರಾತ್ಯಕ್ಷಿಕೆ, ಕೋವಿಡ್ ಲಸಿಕಾಕರಣ, ಕ್ಷಯರೋಗ, ಮಲೇರಿಯಾ, ಹಿಮೊಗ್ಲೋಬಿನ್ ಪರೀಕ್ಷೆ ಸೇರಿದಂತೆ ಉಚಿತ ಪ್ರಯೋಗಾಲಯ ಪರೀಕ್ಷೆಗಳಿರುತ್ತವೆ. ಸ್ಥಳದಲ್ಲೇ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಮಾಡಿಕೊಡಲಾಗುವುದು. ಆದ್ದರಿಂದ ಸಾರ್ವಜನಿಕರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಜಿ.ಪಂ ಉಪಕಾಯಧರ್ಶಿ ಜಯಲಕ್ಷ್ಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಓ.ಮಲ್ಲಪ್ಪ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಡಿಎಸ್ ಡಾ.ಸಿದ್ದನಗೌಡ ಪಾಟಿಲ್, ಆರ್‍ಸಿಹೆಚ್‍ಓ ಡಾ.ನಾಗರಾಜ್‍ನಾಯ್ಕ್, ತಾಲ್ಲೂಕು ವೈದ್ಯಾಧಿಕಾರಿ.ಡಾ.ಚಂದ್ರಶೇಖರ್, ಎಲ್ಲಾ ಜಿಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು, ಇತರೆ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಇತರೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...