Monday, August 24, 2026
Monday, August 24, 2026

ಪಿಯುಸಿ ಪರೀಕ್ಷೆಗೆ ಬರುವವರಿಗೆ ಉಚಿತ ಬಸ್ ಪ್ರಯಾಣಕ್ಕೆ ಕೋರಿಕೆ

Date:

ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಗೆ ತೆರಳಲು, ಹಾಗೆ ಬರೆದು ವಾಪಾಸ್ ಹಿಂದಿರುಗಲು ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣಸಲು ಅವಕಾಶ ನೀಡಲಾಗಿತ್ತು.

ಆದರೆ ಈಗ ಇದೇ ಅವಕಾಶವನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿ ಗಳಿಗೂ ನೀಡಲಾಗುತ್ತಿದೆ. ಇದೇ ಏಪ್ರಿಲ್ ತಿಂಗಳ 22ರಿಂದ ಆರಂಭಗೊಳ್ಳುತ್ತಿರುವಂತ ದ್ವಿತೀಯ ಪಿಯು ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ಕಲ್ಪಿಸಿ ಕೊಡುವ ಯೋಜನೆ ನಡೆಯುತ್ತಿದೆ.

ಈ ಕುರಿತು ಕೆ ಎಸ್ ಆರ್ ಟಿ ಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ದಿನಾಂಕ 22-04-2022ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ.

ಪರೀಕ್ಷೆಗಾಗಿ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಬೇಕಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕೋರಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೋರಿಕೆಯ ಹಿನ್ನಲೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆ ಎಸ್ ಆರ್ ಟಿ ಸಿ ಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ ದಿನಾಂಕ 22-04-2022 ರಿಂದ 18-05-2022ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಪರೀಕ್ಷೆ ಬರೆದು ಹಿಂದಿರುಗೋದಕ್ಕೆ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರೋದಾಗಿ ತಿಳಿಸಿದ್ದಾರೆ.

ಇನ್ನೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು, ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ತೆರಳುವಾಗ ನಿರ್ವಾಹಕರಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪರೀಕ್ಷೆಗೆ ತೆರಳಿ, ಆ ಬಳಿಕ ಮನೆಗೆ ವಾಪಾಸ್ ಆಗಬಹುದಾಗಿದೆ. ಅಲ್ಲದೇ ಬಸ್ಸು ತೆರಳುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು, ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...