Monday, December 15, 2025
Monday, December 15, 2025

ಬಿಜೆಪಿಗೊಂದು ಮನಃಸಾಕ್ಷಿಯ ಪರೀಕ್ಷೆಯಂತಾದ ಕಾರ್ಯಕಾರಿಣಿ ಸಭೆ

Date:

ಮುಂದಿನ ಚುನಾವಣೆಗೆ ಮತ್ತೆ ಬರುವೆ, ಸಾಧ್ಯವಾದರೆ ಪ್ರತಿ ಜಿಲ್ಲೆಗೆ ಬರುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಿಳಿಸಿದರು.

ಒಂದು ವರ್ಷದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಈಗಾಗಲೇ ತಯಾರಿ ಆರಂಭಿಸಿವೆ. ಅದರಂತೆ ನಮ್ಮ ಬಿಜೆಪಿ ಪಕ್ಷವು ಸಹ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಸಭೆಯನ್ನು ಏರ್ಪಡಿಸಿ ಪಕ್ಷದ ಸಂಘಟನೆ ಮಾಡಲಾಗುತ್ತಿದೆ. ಹೊಸಪೇಟೆಯಲ್ಲಿ ಆಯೋಜಿಸಿರುವ ಈ ಸಮಾರಂಭ ನಮಗೆ ಸಂತಸ ತಂದಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ವಿಜಯ ನಗರ ಜಿಲ್ಲೆಯ ಹೊಸಪೇಟೆಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಿಣಿ ಸಭೆ ನಿನ್ನೆ ಮುಕ್ತಾಯವಾಯಿತು. ಸಾರ್ವಜನಿಕ ಸಭೆಯನ್ನು ನಿನ್ನೆ ಸಂಜೆ 6 ಗಂಟೆಗೆ ಪ್ರಾರಂಭವಾಯಿತು. ವಿಶಾಲವಾದ ವೇದಿಕೆಯ ಮೇಲೆ ರಾಜ್ಯದ ಸಚಿವರು ,ರಾಷ್ಟ ನಾಯಕರು ಸುಮಾರು 30 ಆಹ್ವಾನಿತ ರಾಜಕೀಯ ಧುರೀಣರು ವೇದಿಕೆಯನ್ನು ಅಲಂಕರಿಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹ ಸಭೆಯಲ್ಲಿ ಭಾಗವಹಿಸಿ ಸಭೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳನ್ನು ಬಳಸಿ ದೇಶದ ಅಭಿವೃದ್ದಿ ಯಲ್ಲಿ ಬಿಜೆಪಿಯು ಮಾಡಿದ ಬದಲಾವಣೆಗಳನ್ನು ಸವಿಸ್ತಾರವಾಗಿ ವಿವರಿಸಿದ್ದಾರೆ. ಕಾಂಗ್ರೇಸ್ ಪಕ್ಷದ ಮೋಸದ ರಾಜಕೀಯ ಭ್ರಷ್ಟಾಚಾರ ಮತ್ತು ಒಳಜಗಳಗಳನ್ನು ಸಹ ಅವರ ಭಾಷಣದಲ್ಲಿ ಸಾರ್ವಜನಿಕರಿಗೆ ಅರ್ಥವಾಗುವ ಹಾಗೆ ತಿಳಿಸಿದರು. ಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಬಿಜೆಪಿ ಗೆಲುವಿನ ಮಹತ್ವದ ಸಲಹೆಗಳನ್ನು ತಿಳಿಸಿದರು ಚುನಾವಣಾ ಕಾರ್ಯತಂತ್ರ, ಪಕ್ಷ ಬಲವರ್ಧನೆ, ಸಂಘಟನೆಯ ಬಗ್ಗೆ ಕಾರ್ಯಕರ್ತರು ಹೋರಾಡಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತ ಮಾಡಲು ಸಾ ಸಾರ್ವಜನಿಕ ಆಶೀರ್ವಾದ ಪಡೆಯಲು ಮುಂದಾಗಬೇಕು. ಮತ್ತೆ ಬರುತ್ತೇನೆ ಪ್ರತಿ ಜಿಲ್ಲೆಗಳ ಪ್ರವಾಸ ಮಾಡುವೆ ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು.

ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಯಡಿಯೂರಪ್ಪ ರೈತ ಬಂಧುವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬೆಳೆದಿದೆ, ಬೆಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹೊಸ ಪೇಟೆಯ ಸಂಕಲ್ಪ ಸಭೆಯು ಅಸೆಂಬ್ಲಿ ಚುನಾವಣೆಯಲ್ಲಿ ವಿಜಯವನ್ನು ತಂದುಕೊಡಲಿದೆ. ಕರ್ನಾಟಕದ ಮುಂದಿನ ಗೆಲುವು ದಕ್ಷಿಣ ಭಾರತಕ್ಕೆ ಒಂದು ಸಂದೇಶ ನೀಡಲಿದೆ ಎಂದರು. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕರ್ನಾಟಕ ಸ್ವಾಭಿಮಾನಿ ಕರ್ನಾಟಕವಾಗಿ ಪರಿವರ್ತನೆ ಹೊಂದುತ್ತಿದೆ. ರೈತ ವಿಧ್ಯಾ ನಿಧಿ ಪರಿಕಲ್ಪನೆ ಜಾರಿಯಾಗಿದೆ. ವಿವಿಧ ಮಾಸಾಶನ ಹೆಚ್ಚಳ ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ವಿಶೇಷ ಯೋಜನೆಗಳು ಜಾರಿಗೊಳ್ಳುತ್ತಿವೆ ಎಂದು ಅವರು ಮೆಚ್ಚುಗೆ ಸೂಚಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಹೆಸರಿನಲ್ಲೇ ಚುನಾವಣೆ ಎದುರಿಸುತ್ತೇವೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಕಾಮಗಾರಿಗಳನ್ನು ಜನರ ಮುಂದಿದೆ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು ಮತ್ತು ಶ್ರೀ ಅನಂದ್ ಸಿಂಗ್ ರವರಿಗೆ ಅಭಿನಂದನೆ ತಿಳಿಸಿದರು.

ಈ ಎಲ್ಲಾ ನಿಟ್ಟಿನಲ್ಲಿ ಭಾನುವಾರದ ಕಾರ್ಯಕಾರಿಣಿ ಸಭೆ ಮಹತ್ವ ಪಡೆದುಕೊಂಡಿದೆ. ಕಾರ್ಯಕಾರಿಣಿ ಸಭೆಯ ಬಳಿಕ ಹೊಸ ಹುಮ್ಮಸ್ಸಿನಲ್ಲಿ ಹಾಗೂ ಹೊಸ ಕಾರ್ಯತಂತ್ರದ ಮೂಲಕ ಬಿಜೆಪಿ ಪಕ್ಷ ಬಲವರ್ಧನೆ ಮತ್ತು ಚುನಾವಣಾ ತಯಾರಿಗೆ ಸಜ್ಜಾಗಲಿದೆ.

ನಾಯಕತ್ವ ಮತ್ತು ಸಚಿವ ಸಂಪುಟ ವಿಸ್ತರಣೆ ಇನ್ನು ಒಂದು ವಾರದಲ್ಲಿ

ಶ್ರೀ ನಡ್ಡಾ ರವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹಸಿರು ನಿಶಾನೆ ತೋರಿದರೂ ದೆಹಲಿಗೆ ಹೋಗಿ ತಿಳಿಸುವುದಾಗಿ ಹೇಳಿದ್ದಾರೆ. ಈ ಹಿಂದೆ ಎಪ್ರಿಲ್ 6 ರಂದು ನವದೆಹಲಿಯಲ್ಲಿ ನಡ್ಡಾ ಅವರನ್ನು ಭೇಟಿ ಮಾಡಿದ್ದ ಬೊಮ್ಮಾಯಿ, ಶುಕ್ರವಾರ ಸಚಿವ ಸಂಪುಟ ಪುನಾರಚನೆ ಕುರಿತು ಸಂಕ್ಷಿಪ್ತವಾಗಿ ಚರ್ಚಿಸಿರುವುದಾಗಿ ತಿಳಿಸಿದಂತೆ ಬಿಡುವಿನ ವೇಳೆಯಲ್ಲಿ ಮುಖ್ಯಮಂತ್ರಿ ಚರ್ಚಿಸಿದರು. ಈ ವಾರದಲ್ಲಿ ಸಚಿವ ಸಂಪುಟ ಬದಲಾಗುವ ನಿರೀಕ್ಷೆ ಇದೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಕೆಎಸ್ ಈಶ್ವರಪ್ಪ ಅವರು ಭ್ರಷ್ಟಾಚಾರ ಆರೋಪದ ಮೇಲೆ ಸಚಿವ ಸಂಪುಟದಿಂದ ಹೊರಗೆ ನಡೆದಿದೆ. ಈ ಬಾರಿಯ ಸಂಪುಟ ಪುನಾರಚನೆಯಲ್ಲಿ ಹೊಸ ಮುಖಗಳನ್ನು ಸೇರ್ಪಡೆಗೊಳಿಸಲು ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಶ್ರೀ ಬಿ.ಎಲ್. ಸಂತೋಷ್ ಅವರು ಸಹ ಮಧ್ಯಪ್ರವೇಶಿಸಿರುವುದರಿಂದ ಆರ್ ಎಸ್ ಎಸ್ ಮೂಲದವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಹೆಚ್ಚಾಗಿದೆ. ಬಹಿರಂಗಪಡಿಸುತ್ತಿದೆ. ಈ ಬೆಳವಣಿಗೆಗಳಿಗೆ ಹೈಕಮಾಂಡ್ ಆತಂಕಗೊಳ್ಳುವಂತೆ ಮಾಡಿದೆ.

2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷಕ್ಕೆ ಎದುರಾಗಲಿರುವ ಮುಜುಗರವನ್ನು ತಪ್ಪಿಸಲು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕತ್ವವು ಇರುವ ಉತ್ತಮ ಆಯ್ಕೆಗಳ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಸಂಭವವಾಗಿದೆ. ಏಕೆಂದರೆ, ಬೊಮ್ಮಾಯಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬೆಂಬಲವಿದೆ. ನಾಯಕತ್ವ ಬದಲಾವಣೆಯಾಗಿದ್ದೇ ಆದರೆ, ಇದು ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಇದರ ಜೊತೆಗೆ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನೂ ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತಂತೆಯೂ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಪಕ್ಷದ ನಾಯಕತ್ವ ಬಲಪಡಿಸುವುದಕ್ಕಾಗಿ ಶೋಭಾ ಕರಂದ್ಲಾಜೆ, ಸಿಟಿ ರವಿ, ಡಾ ಸಿ ಎನ್ ಅಶ್ವತ್ಥ್ ನಾರಾಯಣ, ಜಗದೀಶ್ ಶೆಟ್ಟರ್ ಅವರ ಹೆಸರುಗಳು ಕೆಲ ದಿನಗಳಿಂದ ಬಿಜೆಪಿ ವಲಯದಲ್ಲಿ ಸದ್ದು ಮಾಡುತ್ತಿದೆ. ನಿನ್ನೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮುಕ್ತಾಯಗೊಂಡ ಬೆನ್ನಲ್ಲೇ ಸರ್ಕಾರ ಹಾಗೂ ಪಕ್ಷದಲ್ಲಾಗುವ ಬದಲಾವಣೆ ಕುರಿತ ಮಾಹಿತಿಗಳು ಬಹಿರಂಗಗೊಳ್ಳಲಿವೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮತ್ತು ಸರ್ಕಾರ ಹಾಗೂ ಪಕ್ಷಕ್ಕೆ ಆಗಿರುವ ಹಾನಿಯ ಕುರಿತಾಗಿ ಜೆ.ಪಿ. ನಡ್ಡಾ ರಾಜ್ಯ ಮುಖಂಡರಿಂದ ಮಾಹಿತಿಯನ್ನು ಪಡೆದುಕೊಳ್ಳಲಿದ್ದಾರೆ. ಸಂತೋಷ್ ಆತ್ಮಹತ್ಯೆ ಪ್ರಕರಣ ಮತ್ತು ಕೆ.ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆಯ ವಿಚಾರ ಚರ್ಚೆ ಆಗುವ ಸಾಧ್ಯತೆ ಇದೆ. ಪ್ರತ್ಯೇಕವಾಗಿ ನಾಯಕರ ಜೊತೆ ಸಭೆ ನಡೆಸಿ ಜೆ.ಪಿ. ನಡ್ಡಾ ಈ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ.

ಕಾರ್ಯಕಾರಿಣಿಯಲ್ಲಿ ಭಾನುವಾರ ಜೆ.ಪಿ. ನಡ್ಡಾ ಅವರು ಹುಬ್ಬಳ್ಳಿಯಿಂದ ಹೊಸಪೇಟೆಗೆ ಆಗಮಿಸಿದರು. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್‌, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಸೇರದಂತೆ ಸಚಿವರು, ಪ್ರಮುಖ ಮುಖಂಡರು, ಶಾಸಕರು, ಸಂಸದರು ಭಾಗವಹಿಸಿದ್ದರು.

ಸಭೆಯಲ್ಲಿ ಹೆಚ್ಚಾಗಿ ಹಾಕಲಾಗಿದ್ದ ಕುರ್ಚಿಗಳು ಖಾಲಿ ಇದ್ದವು. ಹಂಪೆ ಉತ್ಸವದಂತೆ ಕಾರ್ಯಕ್ರಮ, ವೇದಿಕೆ ಆಯೋಜಿಸಲಾಗಿತ್ತು.

ವರದಿ ಕೃಪೆ: ಮುರುಳೀಧರ್ ನಾಡಿಗೇರ್
ಹೊಸಪೇಟೆ – ವಿಜಯನಗರ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...