Tuesday, August 25, 2026
Tuesday, August 25, 2026

ಮುಗ್ಗರಿಸುತ್ತಲಿರುವ ಮುಂಬೈ, ಚನ್ನೈ ಎದುರು ಸೋಲು

Date:

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ತಾನು ಇನ್ನೂ ಗ್ರೇಟ್ ಫಿನಿಷರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸೋಲಿನತ್ತ ಬಹುತೇಕ ಮುಖಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಊಹಿಸಲಾರದ ರೀತಿಯಲ್ಲಿ ಧೋನಿ ಗೆಲ್ಲಿಸಿದ್ದಾರೆ.

ಈ ಮೂಲಕ ತನ್ನ ಬ್ಯಾಟಿಂಗ್ ಸಾಮರ್ಥ್ಯವನ್ನು ಮಾಹಿ ಮತ್ತೊಮ್ಮೆ ಪ್ರದರ್ಶಿಸಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡ ನೀಡಿದ್ದ 156 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮುಗ್ಗರಿಸುತ್ತಾ ಸಾಗಿತ್ತು. ಆದರೆ ಅಂಬಾಟಿ ರಾಯಿಡು ರಾಬಿನ್ ಉತ್ತಪ್ಪ ಹೋರಾಟ ಸಿಎಸ್‌ಕೆಯನ್ನು ಪಂದ್ಯದಲ್ಲಿ ಮುಂದುವರಿಯುವಂತೆ ಮಾಡಿತ್ತು. ಆದರೆ ಅಂತಿಮ ಹಂತದಲ್ಲಿ ಎಂಎಸ್ ಧೋನಿ ಹಾಗೂ ಡ್ವೇಯ್ನ್ ಪ್ರಿಟೋರಿಯಸ್ ಹೋರಾಟ ತಂಡಕ್ಕೆ ಗೆಲುವಿನ ಸಾಧ್ಯತೆಯನ್ನು ತೆರೆದಿಟ್ಟಿತ್ತು.

ಇನ್ನು 156 ರನ್‌ಗಳ ಸವಾಲಿನ ಗುರಿ ಸ್ವೀಕರಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭ ಕೂಡ ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಭಿನ್ನವಾಗಿರಲಿಲ್ಲ. ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಹಾಗೂ ಮಿಚೆಲ್ ಸ್ಯಾಂಟ್ನರ್ ವಿಕೆಟ್‌ಅನ್ನು ಶೀಘ್ರವಾಗಿ ಕಳೆದುಕೊಂಡಿತು. ಆದರೆ ನಂತರ ರಾಬಿನ್ ಉತ್ತಪ್ಪ ಹಾಗೂ ಅಂಬಾಟಿ ರಾಯುಡು ಅವರಿಂದು ಉತ್ತಮ ಪ್ರದರ್ಶನ ಬಂದಿತು. ಆದರೆ ನಂತರ ಬಂದ ನಾಯಕ ರವೀಂದ್ರ ಜಡೇಜಾ ಹಾಗೂ ಶಿವಂ ದುಬೆಯಿಂದ ಉತ್ತಮ ಮೊತ್ತ ಬರಲಿಲ್ಲ.

ಇನ್ನು ಅಂತಿಮ ಹಂತದಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ಡ್ವೇಯ್ನ್ ಪ್ರಿಟೋರಿಯಸ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಪ್ರಿಟೋರಿಯಸ್ ಅಂತಿಮ ಓವರ್‌ನ ಮೊದಲ ಎಸೆತದಲ್ಲಿ ವಿಕೆಟ್ ಕಳೆದುಕೊಂಡರು. ಆದರೆ ಉಳಿದ ಐದು ಎಸೆತಗಳಲ್ಲಿ ಎಂಎಸ್ ಧೋನಿ ಅಬ್ಬರದ ಪ್ರದರ್ಶನ ನೀಡಿದ್ದು ತಂಡಕ್ಕೆ ಅಗತ್ಯವಿದ್ದ 17 ರನ್‌ಗಳನ್ನು ಗಳಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ತನ್ನ ಬ್ಯಾಟಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಅಂತಿಮ ಓವರ್‌ನಲ್ಲಿ ಎಂಎಸ್ ಧೋನಿ ಗೆಲುವಿಗೆ ಅಗತ್ಯವಿದ್ದ 17 ರನ್‌ಗಳನ್ನು ಕಲೆ ಹಾಕಿವ ಮೂಲಕ ಮುಂಬೈ ಇಂಡಿಯನ್ಸ್‌ಗೆ ಟೂರ್ನಿಯಲ್ಲಿ ಸತತ 7ನೇ ಬಾರಿಗೆ ಸೋಲಿನ ರುಚಿ ತೋರಿಸಿದ್ದಾರೆ.

ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್‌ನಲ್ಲಿ ಮೊದಲ ಏಳು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಸೋತ ಏಕೈಕ ತಂಡವಾಗಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದ ಮುಂಬೈ ಇಂಡಿಯನ್ಸ್ ತಂಡದ ಅಗ್ರ ಕ್ರಮಾಂಕ ಹೀನಾಯ ಪ್ರದರ್ಶನ ನೀಡಿತು. ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಇಬ್ಬರೂ ಶೂನ್ಯ ಸುತ್ತಿ ಮೊದಲ ಓವರ್‌ನಲ್ಲಿಯೇ ಪೆವಿಲಿಯನ್ ಸೇರಿಕೊಂಡರು.

ನಂತರ ಬಂದ ಡೆವಾಲ್ಡ್ ಬ್ರೆವಿಸ್ ಕೂಡ ನಾಲ್ಕು ರನ್‌ಗಳಿಗೆ ಔಟಾಗಿ ಹೊರನಡೆದರು. ಆದರೆ ಮುಂಬೈ ಇಮಡಿಯನ್ಸ್ ತಂಡದ ಮಧ್ಯಮ ಕ್ರಮಾಂಕ ಈ ಪಂದ್ಯದಲ್ಲಿ ತಂಡಕ್ಕೆ ಬಲ ತುಂಬುವಲ್ಲಿ ಯಶಸ್ವಿಯಾಯಿತು.

ಸೂರ್ಯಕುಮಾರ್ ಯಾದವ್, ತಿಲಕ್ ವರ್ಮ, ಹೃತಿಕ್ ಶೊಕೀನ್ ಹಾಗೂ ಅಂತಿಮ ಹಂತದಲ್ಲಿ ಜೈದೇವ್ ಉನಾದ್ಕಟ್ ಅವರ ಮಹತ್ವದ ಕೊಡುಗೆಯ ಕಾರಣದಿಂದಾಗಿ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 155 ರನ್‌ಗಳಿಸುವಲ್ಲಿ ಯಶಸ್ವಿಯಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...