Thursday, May 21, 2026
Thursday, May 21, 2026

ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ವಿಡಿಯೊ ಯುವಕನಿಗೆ ಶಿಕ್ಷೆ

Date:

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡುತ್ತಿದ್ದ ಯುವಕನಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಟಿ-1ರ ನ್ಯಾಯಾಧೀಶರು ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.ದಂಡ ವಿಧಿಸಿದ್ದಾರೆ.

ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಡಿ.ರಘು ಶಿಕ್ಷೆಗೆ ಒಳಗಾಗಿದ್ದಾನೆ. ಈತ 2020ರ ಮೇ 6ರಂದು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದನು. ಸಿಐಡಿ ಘಟಕದ ಸೈಬರ್ ಟಿಪ್‌ಲೈನ್ ನೀಡಿದ ಮಾಹಿತಿ ಆಧಾರದ ಮೇಲೆ ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು.

ತನಿಖಾಧಿಕಾರಿ ಸೈಬರ್ ಠಾಣೆ ಇನ್‌ಸ್ಪೆಕ್ಟರ್ ಕೆ.ಟಿ.ಗುರುರಾಜ್ ಅವರು ರಘು ವಿರುದ್ಧ 2020ರ ಡಿ.24ರಂದು ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು.

ಈ ಬಗ್ಗೆ ನಿನ್ನೆ (ಶುಕ್ರವಾರ) ವಿಚಾರಣೆ ನಡೆಸಿದ ನ್ಯಾಯಾಧೀಶ ವಿ.ಎಚ್.ದಯಾನಂದ್ ಅವರು ರಘು ಮೇಲಿನ ಆರೋಪಗಳು ಸಾಬೀತಾದ ಬಳಿಕ,ಆತನಿಗೆ 2 ವರ್ಷ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸದಾ ಕಾರಾಗೃಹ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಗೋರಕ್ಷಕ ಸಂತ ಕಬೀರಾನಂದ ಸ್ವಾಮೀಜಿ. ಲೇ: ಪ್ರಸಾದ ಶ್ರೀವತ್ಸ. ದಾವಣಗೆರೆ

´               ಗೋ ರಕ್ಷಕ ಸಂತ - ಸದ್ಗುರು ಶ್ರೀ ಶ್ರೀ ಶ್ರೀ...

DC Shivamopgga ಹಸನಾದ ಹೈನುಗಾರಿಕಾ ಕ್ಷೇತ್ರ, ಮೂರು ವರ್ಷದ ಸಾಧನೆ- ಸಿಎಂ ಸಿದ್ಧರಾಮಯ್ಯ

DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು...

Department of Handloom and Textile Technology 3 ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Department of Handloom and Textile Technology ಕೈಮಗ್ಗ ಮತ್ತು ಜವಳಿ...

Friends Center ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಶ್ಲಾಘನೀಯ- ಬಿ.ಜಿ‌.ಧನರಾಜ್

Friends Center ಶಿವಮೊಗ್ಗ ನಗರದ ಪ್ರತಿಷ್ಟಿತ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್...