Saturday, May 16, 2026
Saturday, May 16, 2026

ಶಿವಮೊಗ್ಗ ಏರ್ ಪೋರ್ಟಿಗೆ ನನ್ನ ಹೆಸರು ಬೇಡ- ಬಿಎಸ್ ವೈ

Date:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಇತ್ತೀಚಿಗೆ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆಯ ಬಳಿಕ, ಈ ನಿಲ್ದಾಮಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುತ್ತಿರೋದಾಗಿ ಘೋಷಣೆ ಮಾಡಿದ್ದರು.

ಇದೀಗ ನನ್ನ ಹೆಸರು ಇಡೋದು ಬೇಡ ಎಂಬುದಾಗಿ ಮಾಜಿ ಸಿ.
ಎಂ ಬಿ.ಎಸ್. ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು, ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚಿಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದ ಎಂದು ತಿಳಿಸಿದ್ದಾರೆ.

ಮುಂದುವರೆದು, ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು, ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದರೆ ನನ್ನದೊಂದು ಅಳಿಲು ಸೇವೆ ಮಾತ್ರವಾಗಿದೆ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾ ಭಾವ ನನ್ನದು. ಈ ಹಿನ್ನಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.

ಈ ಎಲ್ಲಾ ಕಾರಣದಿಂದ ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...