Monday, October 12, 2026
Monday, October 12, 2026

ಶಾಲಾರಂಭದಿಂದ ಮಕ್ಕಳಿಗೆ ತೊಂದರೆಯಾಗದಂತೆ ನಿಗಾ ವಹಿಸಿ- ಜಯಶ್ರೀ

Date:

ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲೇ ಶಾಲೆಗಳು ಆರಂಭವಾಗಲಿವೆ. ಶಾಲೆಗಳಲ್ಲಿ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮೊದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆ ಜಯಶ್ರೀ ಚನ್ನಾಳ ಸೂಚಿಸಿದರು.

ಬೀದರ್ ನಗರದ‌ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಬಾಲನ್ಯಾಯ ಕಾಯ್ದೆ, ಶಿಕ್ಷಣ ಹಕ್ಕು ಕಾಯ್ದೆ ಹಾಗೂ ಪೋಕ್ಸೊ ಕಾಯ್ದೆಗಳ ಅನುಷ್ಠಾನದ ಕುರಿತ ಸಹಭಾಗಿತ್ವ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ಮಗುವಿನ ಶಿಕ್ಷಣ, ಆರೋಗ್ಯ ಕಾಳಜಿ ಸೇರಿದಂತೆ ಎಲ್ಲ ರೀತಿಯ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಜಿಲ್ಲೆಯಲ್ಲಿ ಪಿ.ಯು.ಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾದ ಮಕ್ಕಳ ಕುರಿತು ಮಾಹಿತಿ ಪಡೆದ ಜಯಶ್ರೀ ಅವರು ಆರ್.ಟಿ.ಇ. ಬಗ್ಗೆ ಚರ್ಚೆ ನಡೆಸಿದರು.

ಗ್ರಾಮೀಣ ಭಾಗದ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ಬಿಸಿಯೂಟ ಹಾಗೂ ಸುತ್ತುಗೋಡೆ ಇರುವಂತೆ ನೋಡಿಕೊಳ್ಳಬೇಕು.
ಕದ್ದು ಮುಚ್ಚಿ ಮಕ್ಕಳ ಮದುವೆಗಳು ನಡೆಯದಂತೆ ನಿಗಾವಹಿಸಬೇಕು. ಸಂಬಂಧಿಸಿದ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಕಾರ್ಯಪ್ರವೃತರಾಗಬೇಕು ಎಂದು ಸೂಚಿಸಿದರು.

ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ವಿವಿಧ‌ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಗೋವಿಂದರಡ್ಡಿ, ಜಿಲ್ಲಾ ಪಂಚಾಯಿಸಿ ಸಿಇಒ ಝಹೀರಾ ನಸೀಮ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಿಶೋರ್ ಬಾಬು, ಬಾಲನ್ಯಾಯ ಮಂಡಳಿಯ ಸದಸ್ಯ ಶಶಿಧರ ಕೋಸಂಬೆ, ಮಕ್ಕಳ ಕಲ್ಯಾಣ ಸಮಿತಿಯ ಧನಲಕ್ಷ್ಮಿ ಪಾಟೀಲ, ಮಂಜುಳಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...