Thursday, October 3, 2024
Thursday, October 3, 2024

ಸಾಮಾಜಿಕ ಭದ್ರತೆ ಪ್ರಯೋಜನಕ್ಕೆಇ- ಶ್ರಮ್ ಕಾರ್ಡ್ ಅವಶ್ಯ-ಸೆಲ್ವಮಣಿ

Date:

ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಅನುಕೂಲ ಮಾಡಿಕೊಡುವ ಇ-ಶ್ರಮ್ ತಂತ್ರಾಂಶದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲ ಅರ್ಹ ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಕೊಂಡು ಕಾರ್ಡ್ ಪಡೆಯುವಂತೆ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಅವರು ತಿಳಿಸಿದ್ದಾರೆ.

ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡಿಸಿ ಕಾರ್ಡ್ ವಿತರಣೆ ಮಾಡಲು ಅಗತ್ಯವಾದ ಎಲ್ಲ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಎನ್ ಡಿಯುಡಬ್ಯು:
ಭಾರತದಲ್ಲಿ 43.7 ಕೋಟಿ ಕಾರ್ಮಿಕರು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯವು ಅಸಂಘಟಿತ ಕಾರ್ಮಿಕರ ಡೇಟಾಬೇಸ್‍ನ್ನು ರಚಿಸಿದೆ. ಅಸಂಘಟಿತ ಕಾರ್ಮಿಕರ ನೋಂದಣಿಗೆ https://eshram.gov.in/ ವೆಬ್‍ಸೈಟ್ ಬಿಡುಗಡೆ ಮಾಡಿದೆ. ಈ ಇ-ಶ್ರಮ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡರೆ ಕಾರ್ಮಿಕರು ಒಂದು ವರ್ಷಕ್ಕೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂ-ಎಸ್‍ಬಿವೈ)ಯಡಿ ಆಕಸ್ಮಿಕವಾಗಿ ಸಾವು ಮತ್ತು ಪೂರ್ಣ ಅಂಗವೈಕಲ್ಯಕ್ಕೆ ರೂ. 2 ಲಕ್ಷ ಮತ್ತು ಭಾಗಶಃ ಅಂಗವೈಕಲ್ಯಕ್ಕೆ ರೂ.1 ಲಕ್ಷಗಳವರೆಗೆ ಪರಿಹಾರ ಪಡೆಯಬಹುದು.

ಈ ಡೇಟಾಬೇಸ್‍ನ ಆಧಾರದ ಮೇಲೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಚಿವಾಲಯಗಳು ಅಥವಾ ಸರ್ಕಾರಗಳು ಅನುಷ್ಠಾನಗೊಳಿಸುತ್ತಿವೆ. ಈ ಡೇಟಾಬೇಸ್ ಅಸಂಘಟಿತ ಕಾರ್ಮಿಕರಿಗೆ ನೀತಿ ಮತ್ತು ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಸರ್ಕಾರಕ್ಕೆ ಸಹಾಯ ಮಾಡುತ್ತದೆ.

ಕಾರ್ಮಿಕ ವಲಯ: ಅಸಂಘಟಿತ ಕಾರ್ಮಿಕ ವಲಯದಲ್ಲಿ ಮಹಾತ್ಮಾಗಾಂಧಿ ನರೇಗಾ, ಅಂಗನವಾಡಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಸಣ್ಣ ಹಾಗೂ ಅತಿ ಸಣ್ಣ ರೈತರು, ಪಶುಸಂಗೋಪನಗಾರರು, ನೇಕಾರರು, ಬಡಗಿ ಕೆಲಸಗಾರರು, ಕ್ಷೌರಿಕರು, ಮನೆಕೆಲಸಗಾರರು, ಹೋಟೆಲ್ ಕಾರ್ಮಿಕರು, ವಲಸೆ ಕಾರ್ಮಿಕರು, ಮೆಕ್ಯಾನಿಕ್ ಕಾರ್ಮಿಕರು, ಆನ್‍ಲೈನ್ ಸೇವಾ ಕಾರ್ಮಿಕರು, ಹೋಟೆಲ್ ಕಾರ್ಮಿಕರು, ಚರ್ಮಗಾರರು, ಸಾರಿಗೆ ಕಾರ್ಮಿಕರು ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‍ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಒಳಗೊಳ್ಳುತ್ತಾರೆ.

ಇ-ಶ್ರಮ್ ತಂತ್ರಾಂಶದಲ್ಲಿ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರನ್ನು ಸಾಮಾನ್ಯ ಸೇವಾ ಕೇಂದ್ರ(ಸಿಎಸ್‍ಸಿ) ಹಾಗೂ ಗ್ರಾ.ಪಂ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ಮಾಡುವ ಮೂಲಕ ಉಚಿತವಾಗಿ ನೋಂದಣಿ ಮಾಡಿಸಿ ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಅಸಂಘಟಿತ ವಲಯದ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.

ಇ-ಶ್ರಮ್ ನೋಂದಣಿ ಅರ್ಹತೆ : 16 ರಿಂದ 59 ವರ್ಷಗಳಾಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇ.ಎಸ್.ಐ ಮತ್ತು ಪಿ.ಎಫ್ ಸದಸ್ಯರಾಗಿರಬಾರದು. ಅಸಂಘಟಿತ ಕಾರ್ಮಿಕರ ವರ್ಗಗಳಲ್ಲಿ ಕೆಲಸ ಮಾಡುತ್ತಿರಬೇಕು.

ಅವಶ್ಯಕ ದಾಖಲೆಗಳು : ಆಧಾರ್ ಕಾರ್ಡ್, ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು.

ನೋಂದಣಿ ಗುರಿ : ರಾಜ್ಯದಲ್ಲಿ 1,89,18,000 ಇ-ಶ್ರಮ್ ನೋಂದಣಿ ಗುರಿ ಹೊಂದಲಾಗಿದ್ದು ಈವರೆಗೆ 61,63,431 ಸಾಧನೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೆ 2,15,605 ನೋಂದಣಿ ಆಗಿದ್ದು, ಸ್ವತಃ ಕಾರ್ಮಿಕರು, ಜೊತೆಗೆ ಕಾರ್ಮಿಕರಿಗೆ ಸಂಬಂಧಿಸಿದ ಇಲಾಖೆಗಳು ಮತ್ತು ಕಾರ್ಮಿಕ ಸಂಘಟನೆಗಳು ನೋಂದಣಿ ಮಾಡಿಸಬಹುದು.

ಇ-ಶ್ರಮ್ ಅರಿವು ಮತು ಪ್ರಚಾರ : ಇ-ಶ್ರಮ್ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿಯ ಕುರಿತು ಅರಿವು ಮೂಡಿಸಲು ಆಟೋ ಪ್ರಚಾರ, ಪತ್ರಿಕಾ ಪ್ರಕಟಣೆ, ಗ್ರಾ.ಪಂ, ಸಿಎಸ್‍ಸಿ ಮತ್ತು ನಗರಗಳಲ್ಲಿ ನೋಂದಣಿ ಕುರಿತು ಕ್ಯಾಂಪ್‍ಗಳನ್ನು ಮಾಡಿ ಎಲ್ಲ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ ಮಾಡುವಂತೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...