Sunday, October 18, 2026
Sunday, October 18, 2026

ಕಂದಾಯ ಇಲಾಖೆಗೆ ಭೂಮಿ ಹಸ್ತಾಂತರ ಬಗರ್ ಹುಕುಂ ಸಮಸ್ಯೆ ಕೊಂಚ ಪರಿಹಾರ

Date:

ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ 6 ಲಕ್ಷ ಹೆಕ್ಟೇರ್‌ ಭೂಮಿ ಹಸ್ತಾಂತರವಾಗಲಿದೆ.

ಈ ಪೈಕಿ ಸುಮಾರು 5 ಲಕ್ಷ ಹೆಕ್ಟೇರ್‌ ಅನ್ನು 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವವರಿಗೆ ಹಂಚಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಇಲಾಖೆಯು ತನ್ನ ಅಗತ್ಯಕ್ಕೆ ಬೇಕಾದ ಭೂಮಿ ಯನ್ನು ಹೊರತುಪಡಿಸಿ ಉಳಿದ ಭೂಮಿಯನ್ನು ರೈತರಿಗೆ ಹಂಚಲಿದೆ. ಈ ಮೂಲಕ ಮೈಸೂರು, ಚಾಮರಾಜನಗರ, ಶಿವಮೊಗ್ಗ ಸಹಿತ ರಾಜ್ಯಾದ್ಯಂತ ಇರುವ ಬಗರ್‌ ಹುಕುಂ ಸಮಸ್ಯೆಗೆ ಶಾಶ್ವತ ತೆರೆ ಬೀಳಲಿದೆ ಎಂದು ತಿಳಿಸಿದರು.

ಈ ಮೊದಲು ಡೀಮ್ಡ್ ಫಾರೆಸ್ಟ್‌ ಎಂದು ಗುರುತಿಸಿ ಅರಣ್ಯ ಇಲಾಖೆ ವಶದಲ್ಲಿದ್ದ 6 ಲಕ್ಷ ಹೆಕ್ಟೇರ್‌ ಭೂಮಿ ಈಗ ಕಂದಾಯ ಇಲಾಖೆಗೆ ಹಸ್ತಾಂತರ ವಾಗಲಿದೆ ಎಂದು ಹೇಳಿದರು.

ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ 90 ಸಾವಿರ ಎಕರೆಗೂ ಹೆಚ್ಚು ಭೂಮಿ ಒತ್ತುವರಿ ಯಾಗಿದೆ. ಹೀಗೆ ಒತ್ತುವರಿಯಾದ ಜಮೀನನ್ನು ಒತ್ತುವರಿದಾರರಿಗೇ 30 ವರ್ಷಗಳ ಗುತ್ತಿಗೆ ಆಧಾರದ ಮೇಲೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ 12 ಸಾವಿರ ಎಕರೆ, ಹಾಸನದಲ್ಲಿ 30 ಸಾವಿರ ಎಕರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 45 ಸಾವಿರ ಎಕರೆ ಭೂಮಿ ಒತ್ತುವರಿ ಯಾಗಿದೆ. ಒತ್ತುವರಿಯಾದ ಭೂಮಿಯಲ್ಲಿ ಕಾಫಿ, ಏಲಕ್ಕಿ ಸಹಿತ ಹಲವು ಬೆಳೆಗಳನ್ನು ಬೆಳೆಯ ಲಾಗುತ್ತಿದೆ. ಈ ಪೈಕಿ ಐದು ಎಕರೆಗಿಂತ ಕಡಿಮೆ ಪ್ರಮಾಣದ ಒತ್ತುವರಿ ಮಾಡಿಕೊಂಡವರ ಸಂಖ್ಯೆ ಶೇ. 90ರಷ್ಟಿದೆ ಎಂದು ಸಚಿವರು ವಿವರಿಸಿದರು.

ಕಂದಾಯ ಇಲಾಖೆಗೆ ಮರಳಿ ಬರುವ ಪೈಕಿ ಎಷ್ಟು ಪ್ರಮಾಣದ ಭೂಮಿ ಸರಕಾರದ ಅಗತ್ಯಕ್ಕೆ ಬೇಕು ಎಂದು ಗುರುತಿಸ ಲಾಗುತ್ತಿದ್ದು, ಆಸ್ಪತ್ರೆ ಸಹಿತ ಸಾರ್ವಜನಿಕ ಸೇವೆಯ ಕಟ್ಟಡಗಳಿಗೆ ಇದು ಬಳಕೆಯಾಗಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...