Sunday, September 27, 2026
Sunday, September 27, 2026

₹532 ಕೋಟಿ ವೆಚ್ಚದ ಅನುಭವ ಮಂಟಪ ಯೋಜನೆಗೆ ಒಪ್ಪಿಗೆ

Date:

ಬಸವ ಕಲ್ಯಾಣದಲ್ಲಿ 532 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಕೈಗೆತ್ತಿಕೊಂಡಿರುವ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ 532 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಿದೆ. ಮೂರು ವರ್ಷಗಳೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.

ಅನುಭವ ಮಂಟಪ ಬಸವಣ್ಣನವರ ಕ್ರಾಂತಿಕಾರಿ ವೇದಿಕೆ. ಈ ಮಂಟಪದ ಮೂಲಕ ಸಮಾಜದ ಓರೆಕೋರೆಗಳನ್ನು ತಿದ್ದುವ ಕೆಲಸವನ್ನು ಬಸವಣ್ಣನವರು ಮಾಡಿದ್ದಾರೆ. ಅವರು ಮಾಡಿರುವ ಸಾಮಾಜಿಕ ಕ್ರಾಂತಿಯನ್ನು ಪ್ರತಿಬಿಂಬಿಸುವ ರೂಪದಲ್ಲಿ ಅನುಭವ ಮಂಟಪ ನಿರ್ಮಾಣವಾಗಲಿದೆ. ಅನುಭವ ಮಂಟಪದಲ್ಲಿ 12ನೇ ಶತಮಾನದಲ್ಲಿ ಇದ್ದಂತಹ ವಚನಕಾರರು ದಾರ್ಶನಿಕ ಪುರುಷರ ಕುರಿತಾದ ಮಾಹಿತಿ ನೀಡುವಂತಹ ಕಿರು ಚಿತ್ರಗಳ ಪ್ರದರ್ಶನ, ಬಸವಣ್ಣನವರ ಜೀವನ ಸಾಧನೆ ಬಿಂಬಿಸುವ ಮಾಹಿತಿಗಳನ್ನು ಅನುಭವ ಮಂಟಪಕ್ಕೆ ಆಗಮಿಸುವ ಎಲ್ಲರಿಗೂ ವಿವರಿಸುವ ವ್ಯವಸ್ಥೆ ಈ ಅನುಭವ ಮಂಟಪದಲ್ಲಿ ಇರಲಿದೆ ಎಂದರು.

ಕಂದಾಯ ಸಚಿವ ಆರ್.ಅಶೋಕ್, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ, ರಘುನಾಥ ರಾವ್ ಮಾಲ್ಕಪುರ್, ಅಮರನಾಥ ಪಾಟೀಲ್, ಶಾಸಕರಾದ ಈಶ್ವರ ಖಂಡ್ರೆ, ಶಶೀಲ್ ನಮೋಶಿ ಮೊದಲಾದವರು ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ವಿಶೇಷ ಅಧಿಕಾರಿ ಹಾಗೂ ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಬಸವಕಲ್ಯಾಣ ವೃದ್ಧಿ ಮಂಡಳಿಯ ಆಯುಕ್ತ ಶಿವಕುಮಾರ್ ಶೀಲವಂತ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...