Friday, May 8, 2026
Friday, May 8, 2026

ಹೊಸ ಸಂಕಲ್ಪಕ್ಕೆ ಜೆಡಿಎಸ್ ಜನತಾ ಜಲಧಾರೆ ಸಮಾವೇಶ

Date:

ಜೆಡಿಎಸ್‌ನಿಂದ ಕಳೆದ ತಿಂಗಳು 16ರಂದು ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿಯಾಗಿ ನಡಿದಿದ್ದು ಮೇ 13ರಂದು ಸಮಾರೋಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೃಹತ್ ಸಮಾವೇಶದ ಸಿದ್ಧತೆ ಮತ್ತು ರೂಪುರೇಶೆಗಳ ಬಗ್ಗೆ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.

ಇದೇ ಮೇ ತಿಂಗಳ 13ರಂದು ನೆಲಮಂಗಲ ಟೋಲ್ ಪ್ಲಾಜಾ ಬಳಿ ಬೃಹತ್ ಜನತಾ ಜಲಧಾರೆ ಸಮಾವೇಶದ ಮೂಲಕ ಸಮಾಪ್ತಿಯಾಗಲಿದೆ ಎಂದು ತಿಳಿದುಬಂದಿದೆ.

ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು. ಸಭೆಯ ಬಳಿಕ ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ ಮಾಧ್ಯಮಗೋಷ್ಠಿ ನಡೆಸಿದರು.

ರಾಜ್ಯದ 184 ವಿಧಾನಸಭೆ ಕ್ಷೇತ್ರಗಳಲ್ಲಿ ಜಲಧಾರೆಯ 15 ಗಂಗಾ ರಥಗಳು ಯಶಸ್ವಿಯಾಗಿ ಸಂಚರಿಸುತ್ತಿವೆ. ಇವುಗಳ ಮೂಲಕ ರಾಜ್ಯದ ಎಲ್ಲಾ ಜೀವ ನದಿಗಳಿಂದ ಸಂಗ್ರಹ ಮಾಡಲಾಗಿರುವ ಪುಣ್ಯಜಲವನ್ನು ಒಂದು ಬೃಹತ್ ಕಲಶಕ್ಕೆ ತುಂಬಿಸಿ ಸಮಾವೇಶದಲ್ಲಿ ಪೂಜೆ ನೆರವೇರಿಸಲಾಗುವುದು. ಈ ಸಮಾವೇಶದಲ್ಲಿ 5 ಲಕ್ಷಕ್ಕಿಂತ ಹೆಚ್ಚು ಜನ ಸೇರಲಿದ್ದಾರೆ ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ ಹೇಳಿದರು.

ಮೇ 16ರ ಸಂಜೆ 4 ಗಂಟೆಗೆ ಆರಂಭ ಆಗಲಿರುವ ಸಮಾವೇಶದಲ್ಲಿ ಮಾಜಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ, ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಹಿರಿಯ ಮುಖಂಡರು, ಸಾಹಿತಿಗಳು, ಬುದ್ಧಿಜೀವಿಗಳು, ಕನ್ನಡಪರ, ರೈತಪರ ಹೋರಾಟಗಾರರು ಭಾಗಿಯಾಗುವರು.

ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ಸಿಕ್ಕರೆ ಐದು ವರ್ಷಗಳಲ್ಲಿ ಜನತಾ ಸರಕಾರ ಕೈಗೊಳ್ಳಲಿರುವ ಕಾರ್ಯಕ್ರಮಗಳ ಬಗ್ಗೆ ಆ ಸಮಾವೇಶದಲ್ಲಿ ಸಂಕಲ್ಪ ಮಾಡಲಾಗುವುದು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Backward Classes Welfare Department ಶುಲ್ಕ ಮರುಪಾವತಿ ಕಾರ್ಯಕ್ರಮದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

District Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ...

Bhadra dam ಬೇಸಿಗೆ ಹಂಗಾಮಿನ ಬೆಳೆಗಳಿಗೆ ಮೇ 17ರವರೆಗೆ ನೀರು ಮುಂದುವರಿಕೆ

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು...

Youth Hostel Association ದೇವ ಭೂಮಿಯಲ್ಲಿ ಚಾರ್ ದಾಮ್ ಯಾತ್ರೆ ಅವಿಸ್ಮರಣಿಯ : ಎಸ್.ಎಸ್.ವಾಗೇಶ್

Youth Hostel Association ಉತ್ತರಖಾಂಡ ರಾಜ್ಯವು ನಮ್ಮ ದೇಶದ ದೇವ...