Thursday, August 13, 2026
Thursday, August 13, 2026

ಹಗರಣ ಮಾಹಿತಿ ತಿಳಿದ 2 ಗಂಟೆಯೊಳಗೇ ವಿಶೇಷ ತನಿಖೆಗೆ ನಿರ್ದೇಶನ

Date:

545 ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಅನುವಾಗುವಂತೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಕಟಿಸಿದರು.

ಕಲಬುರಗಿಯ ತಾಜ ಸುಲ್ತಾನಪುರದಲ್ಲಿರುವ ಕೆಎಸ್‌ಆರ್ ಪಿ 6ನೇ ಪಡೆಯ ಹೆಚ್ಚುವರಿ ತರಬೇತಿ ಶಾಲೆಯ ಆವರಣದಲ್ಲಿ ಇಂದು ಶುಕ್ರವಾರ ನಡೆದ ವಿಶೇಷ ಮೀಸಲು ಪೊಲೀಸ್ ಕಾನ್ ಸ್ಟೆಬಲ್ ಪ್ರಶಿಕ್ಷಣಾರ್ಥಿಗಳ 4ನೇ ತಂಡದ ನಿರ್ಗಮನ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಈ ಹಿಂದೆ ಅನೇಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದ್ದರೂ ತನಿಖೆ ಮಾಡಿರಲಿಲ್ಲ. ಒಂದು ವೇಳೆ ತನಿಖೆಯಾಗಿದ್ದರೆ ಈ ಪ್ರಕರಣ ನಡೆಯುತ್ತಿರಲಿಲ್ಲ. ಆದರೆ ಈ ವಿಷಯ ಗೊತ್ತಾದ 2 ಗಂಟೆಯೊಳಗೆ ವಿಶೇಷ ತಂಡ ರಚಿಸಿ ತನಿಖೆಗೆ ನಿರ್ದೇಶಿಸುವ ಮುಖಾಂತರ ಬದ್ಧತೆ ತೋರಿಸಿದ್ದೇವೆ. ಇಲ್ಲಿಯವರೆಗೆ 48 ಜನರನ್ನು ಬಂಧಿಸಲಾಗಿದೆ. ತನಿಖೆ ಆಳವಾಗಿ ನಡೆಯುತ್ತಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ನಿಶ್ಚಿತ ಎಂದರು.

ಪೊಲೀಸ್ ಇಲಾಖೆ ಬಲವರ್ಧನೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಠಾಣೆಗಳ ಅಭಿವೃದ್ಧಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. 400 ವಿಧಿವಿಜ್ಞಾನ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ನಿವೃತ್ತ ಸಿಬ್ಬಂದಿಗೆ ವೈದ್ಯಕೀಯ ವೆಚ್ಚ ಭರಿಸಲು ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಪ್ರಕಟಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...