ತೆಲಂಗಾಣದಲ್ಲಿ ಚುನಾವಣಾ ರಣಕಹಳೆ ಮೊಳಗಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಆಡಳಿತಾರೂಢ ಟಿಆರ್‌ಎಸ್ ಸರಕಾರವು ಧರ್ಮಾಧಾರಿತ ಮೀಸಲು ಜಾರಿಗೆ ತರಲು ಹೊರಟಿದ್ದು, ಇದರಿಂದ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯ ಮೇಲೆ ಪರಿಣಾಮ ಬೀರುತ್ತದೆ.
ಸಿಎಂ ಕೆಸಿಆರ್ ಅವರು ಮುಸ್ಲಿಮರಿಗೆ ಶೇ.12ರಷ್ಟು ಮೀಸಲು ನೀಡಲು ಮುಂದಾಗಿರುವುದನ್ನು ತಡೆಯುತ್ತೇವೆ. ನಾವು ಅಲ್ಪಸಂಖ್ಯಾತರ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿದರು.
ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಕೈಗೊಂಡಿರುವ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಟಿಆರ್‌ಎಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಭರವಸೆಗಳನ್ನು ಈಡೇರಿಸದ ಆರೋಪದ ಮೇಲೆ ತರಾಟೆಗೆ ತೆಗೆದುಕೊಂಡರು. ತಮ್ಮ ಪಕ್ಷವು ಚುನಾವಣೆಯನ್ನು ಎದುರಿಸಲು ಸಿದ್ಧವಾಗಿದೆ. ಮುಂದಿನ ವರ್ಷ ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೀಸಲಾತಿಯನ್ನು ಬಿಜೆಪಿ ಕೊನೆಗೊಳಿಸಲಿದೆ ಮತ್ತು ಎಸ್‌ಟಿ, ಎಸ್‌ಸಿಗಳು ಮತ್ತು ಹಿಂದುಳಿದ ವರ್ಗಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಹೇಳಿದರು.