Tuesday, August 25, 2026
Tuesday, August 25, 2026

ಕಬ್ಬಿಣ ಅದಿರು ರಫ್ತಿಗೆ ಸುಪ್ರೀಂ ಅನುಮತಿ: ಗರಿಗೆದರಿದ ಗಣಿಗಳು

Date:

ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿನ ಗಣಿಗಳಿಂದ ಹೊರತೆಗೆಯಲಾದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಕೋರ್ಟ್ ನಿನ್ನೆ ಶುಕ್ರವಾರ ಅನುಮತಿ ನೀಡಿದೆ.

ಅದಿರು ರಫ್ತಿಗೆ ಅವಕಾಶ ಕೋರಿ ಗಣಿ ಮಾಲೀಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠವು, ಅದಿರು ರಫ್ತಿಗೆ 11 ವರ್ಷಗಳ ನಂತರ ಹಸಿರು ನಿಶಾನೆ ನೀಡಿದೆ.

ಇ ಹರಾಜು ಮೂಲಕ ಅದಿರು ಖರೀದಿಸುವುದಕ್ಕೆ ಸಾಕಷ್ಟು ಸಮಸ್ಯೆಗಳು ಇರುವುದರಿಂದ ಮಾರಾಟ ಪ್ರಕ್ರಿಯೆ ನೀರಸವಾಗಿತ್ತು ಎಂದು ಹೇಳಿರುವ ಪೀಠ, ಇ ಹರಾಜಿನ ಮೂಲಕ ರಾಜ್ಯದಲ್ಲಿ ಅದಿರು ಮಾರಾಟಕ್ಕೆ ಇದ್ದ ಕೆಲವು ಕಠಿಣ ನಿಯಮಗಳನ್ನು ಸಡಿಲಗೊಳಿಸಿ ಆದೇಶವನ್ನು ನೀಡಿದೆ.

ಇದರಿಂದಾಗಿ ಉಕ್ಕು ಉತ್ಪಾದನಾ ಘಟಕಗಳು ಸ್ಥಳೀಯವಾಗಿ ಅದಿರು ಖರೀದಿಸಲು ಇದ್ದ ಕಠಿಣ ನಿಯಮಗಳಿಂದ ರಿಯಾಯಿತಿ ದೊರೆತಂತಾಗಿದೆ.

ರಾಜ್ಯದ ಗಣಿಗಳಿಂದ ಹೊರ ತೆಗೆಯಲಾದ ಕಬ್ಬಿಣದ ಅದಿರನ್ನು ರಫ್ತು ಮಾಡುವ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಸುಪ್ರೀಂ ಕೋರ್ಟ್‌ ಇತ್ತೀಚೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಸೂಚಿಸಿತ್ತು.

ಇದಕ್ಕೆ ಕಳೆದ ತಿಂಗಳು ಪ್ರತಿಕ್ರಿಯೆ ನೀಡಿದ್ದ ಕರ್ನಾಟಕ ಸರ್ಕಾರ, ಅದಿರು ರಫ್ತಿನ ವಿರುದ್ಧ ತನ್ನ ನಿಲುವು
ಸ್ಪಷ್ಟಪಡಿಸಿತ್ತು.

ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ಜಿಲ್ಲೆಗಳಲ್ಲಿನ ಗಣಿಗಳಿಂದ ಅದಿರು ರಫ್ತು ಮಾಡುವುದಕ್ಕೆ ಸುಪ್ರೀಂ ಕೋರ್ಟ್ 2011ರಿಂದ ನಿಷೇಧ ಹೇರಿತ್ತು.

ಅಕ್ರಮ ಗಣಿಗಾರಿಕೆ ತಡೆಯುವ ನಿಟ್ಟಿನಲ್ಲಿ ಅದಿರು ರಫ್ತು ನಿಷೇಧಿಸಬೇಕು. ಅದಿರು ಮಾರಾಟದ ಮೇಲೂ ಕಠಿಣ ಕ್ರಮ ಕೈಗೊಂಡು ನಿಯಮಾವಳಿ ರೂಪಿಸಬೇಕು ಎಂದು ಕೋರಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...