ಕರಾವಳಿಯ ಜಿಲ್ಲೆಗಳಲ್ಲಿ ಮೇ 21 ಮತ್ತು 22ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ನಾಳೆ 115ಮಿ.ಮೀಗೂ ಅಧಿಕ ಮಳೆ ಸುರಿಯುವ ಸಾದ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಮೇ 22ರಂದು 65 ಮಿ.ಮೀ. ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ನೀಡಲಾಗಿದೆ. ಮಳೆಯೊಂದಿಗೆ ಗುಡುಗು-ಸಿಡಿಲಿನಿಂದ ಕೂಡಿದ ಗಾಳಿಯೂ ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.
ಕರಾವಳಿಯ ತೀರದಲ್ಲಿ ಗಂಟೆಗೆ 40ರಿಂದ 60 ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.