ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಇನ್ನೂ ಮುಂದುವರೆದಿದೆ. ಇನ್ನೂ 3 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಸುರಿಯಲಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಇನ್ನೂ ಮೇ 24ರವರೆಗೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮೇ 27ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ. ಜೂನ್ ತಿಂಗಳ ಮೊದಲ ವಾರಕ್ಕೆ ಕರ್ನಾಟಕದಲ್ಲಿ ಮಾನ್ಸೂನ್ ಶುರುವಾಗಲಿದೆ. ಅದಕ್ಕೂ ಮುಂಚೆ ಕೇರಳದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ.ಇಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದರೂ ಇಂದಿನಿಂದ ಮಳೆಯ ಪ್ರಮಾಣ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಲಿದೆ