ಕೋವಿಡ್ ಬಗೆಗಿನ ಪ್ರಚಾರದ ನಡುವೆಯೂ ನೂರು ಕೋಟಿ ಲಸಿಕೆ ನೀಡಿರುವುದು ದೇಶದ ಸಾಧನೆಯಾಗಿದೆ. ಅನೇಕರು ಇದರ ಬಗ್ಗೆ ಸಲ್ಲದ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಪ್ರಧಾನಿಗಳು ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ತಮ್ಮ ಕೆಲಸ ತಾವು ಮಾಡಿ ದೇಶದಲ್ಲಿ ಒಂದು ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದ ಆರೋಗ್ಯ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ಕೊರೊನ ವಾರಿಯರ್ಸ್ ಸನ್ಮಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಗೃಹಸಚಿವ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ರಾಜೇಶ್ ಸುರಗಿಹಳ್ಳಿ, ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಸೇರಿದಂತೆ ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.