ದಕ್ಷಿಣ ಭಾರತದ ಚಿರಾಪುಂಜಿ ಎಂದೇ ಬಿರುದು ಪಡೆದುಕೊಂಡಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಕೆಎಸ್‌ಡಿಎಂಎ) ಪ್ರಕಾರ 2015 ಮತ್ತು 2021ರ ನಡುವಿನ ಏಳು ವರ್ಷಗಳಲ್ಲಿ 5 ಬಾರಿ ಉಡುಪಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಹೆಚ್ಚು ಮಳೆ ಪ್ರಮಾಣ ದಾಖಲಾಗಿದೆ.
ಅಂಕಿ-ಅಂಶಗಳ ಪ್ರಕಾರ ಉಡುಪಿ ಜಿಲ್ಲೆಯ ಬೈರಂಪಳ್ಳಿಯಲ್ಲಿ 2016ರಲ್ಲಿ ಅತಿ ಹೆಚ್ಚು ಅಂದರೆ 5,916 ಮಿ. ಮೀ. ಪ್ರಮಾಣದ ಮಳೆ ದಾಖಲಾಗಿದೆ. 2017ರಲ್ಲಿ ಕಾರ್ಕಳ ತಾಲೂಕಿನ ಶಿರಾಳುವಿನಲ್ಲಿ 6,936 ಮಿ. ಮೀ. ಮಳೆಯಾಗಿದೆ.
ಉಡುಪಿ ಜಿಲ್ಲೆ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾಗಿ ಗುರುತಿಸಿಕೊಂಡಿದೆ.
ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 2016ರಲ್ಲಿ 5,524 ಮಿ.ಮೀ. ಮತ್ತು 2017ರಲ್ಲಿ 5,345 ಮಿ.ಮೀ. ಮಳೆಯೊಂದಿಗೆ ಅಗ್ರಸ್ಥಾನ ಪಡೆದಿತ್ತು.
ಆದರೆ 2019ರಲ್ಲಿ ಉಡುಪಿಯ ಹೆಬ್ರಿಯ ದಾಖಲೆ ಪ್ರಮಾಣದ 9,340 ಮಿ. ಮೀ. ಮಳೆಯೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. 2020ರಲ್ಲಿ ಇನ್ನಂಜೆಯಲ್ಲಿ 7,988 ಮಿ. ಮೀ. ಮಳೆ ಪ್ರಮಾಣ ದಾಖಲಾಗುವ ಮೂಲಕ ಅಗ್ರಸ್ಥಾನ ಪಡೆದಿದೆ.
