Tuesday, August 25, 2026
Tuesday, August 25, 2026

ಉಡುಪಿಗೆ ಬರುವವರ ಮೇಲೆ ಪೋಲಿಸ್ ವಿಶೇಷ ನಿಗಾ

Date:

ಕರಾವಳಿ ಅತಿಸೂಕ್ಷ್ಮ ಪ್ರದೇಶವಾಗಿದೆ. ಉಡುಪಿಯಲ್ಲಿ ಇತ್ತೀಚೆಗೆ ಹೊರಗಿನಿಂದ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಹೆಚ್ಚಿದ್ದು ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಜತೆಗೆ ಜಿಲ್ಲೆಯ ಎಲ್ಲ ಚೆಕ್‌ಪೋಸ್ಟ್‌ಗಳನ್ನು ಇನ್ನಷ್ಟು ಬಿಗಿಗೊಳಿಸಿ, ಹೊರಗಿನಿಂದ ಬರುವ ಸಂಶಯಾಸ್ಪದ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ವಹಿಸಲಾಗುವುದು ಎಂದು ಎಡಿಜಿಪಿ ಆಲೋಕ್‌ ಕುಮಾರ್‌ ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಅಧಿಕಾರಿಗಳ ಜತೆ ಸಭೆ ನಡೆಸಿ ಅನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಉಡುಪಿಯಲ್ಲಿ ಹೊರಗಿನವರು ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾನೂನಿನ ಇತಿಮಿತಿಯಲ್ಲಿ ಏನೇನೂ ಮಾಡಲು ಸಾಧ್ಯವೋ ಆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಕೆಲವು ತಾಂತ್ರಿಕ ವಿಷಯ ಇರುವುದರಿಂದ ತನಿಖೆ ಇನ್ನಷ್ಟು ಸಮಯ ಹಿಡಿಯಲಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದ್ದು ಸಮಿತಿ ಇನ್ನೂ ವರದಿ ನೀಡಿಲ್ಲ ಎಂದು ಹೇಳಿದರು.

ಕರಾವಳಿಯ ಸಮಸ್ಯೆಯನ್ನು ಅರಿಯುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಮೊದಲಿನಿಂದಲೂ ಈ ಪ್ರದೇಶದಲ್ಲಿ ಅಂಡರ್‌ವರ್ಲ್ಡ್ ಅನಂತರ ಬೇರೆ ಬೇರೆ ಪ್ರಕರಣ, ಈಗ ಹಿಜಾಬ್‌ ಹೀಗೆ ಸೂಕ್ಷ್ಮ ಪ್ರದೇಶವಾಗಿಯೇ ಉಳಿದಿದೆ. ಯಾವುದೇ ಪ್ರಕರಣ ಬಂದರೂ ಪೊಲೀಸ್‌ ಇಲಾಖೆ ಸಮರ್ಥವಾಗಿ ಎದುರಿಸಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...