Tuesday, August 25, 2026
Tuesday, August 25, 2026

ಹಿಂದೂ ಮಹಾಸಾಗರದಲ್ಲಿ ಸುನಾಮಿ, ಎಚ್ಚರಿಕೆ!

Date:

ಪೂರ್ವ ಟಿಮೋರ್ ಕರಾವಳಿಯಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸುನಾಮಿ ಉಂಟಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಪೂರ್ವ ಟಿಮೋರ್ ಮತ್ತು ಇಂಡೋನೇಷ್ಯಾ ನಡುವೆ ವಿಭಜನೆಯಾಗಿರುವ ಟಿಮೋರ್ ದ್ವೀಪದ ಪೂರ್ವ ತುದಿಯಿಂದ 51.4 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.

ಹೀಗಾಗಿ, ಹಿಂದೂ ಮಹಾಸಾಗರದ ಸುನಾಮಿ ಎಚ್ಚರಿಕೆ ಮತ್ತು ತಗ್ಗಿಸುವಿಕೆ ವ್ಯವಸ್ಥೆ (IOTWMS) ಈ ಪ್ರದೇಶಕ್ಕೆ ಸುನಾಮಿ ಎಚ್ಚರಿಕೆಯನ್ನು ನೀಡಿದೆ. ಪೂರ್ವ ಟಿಮೋರ್ ಪೆಸಿಫಿಕ್ “ರಿಂಗ್ ಆಫ್ ಫೈರ್” ನಲ್ಲಿ ನೆಲೆಸಿದೆ. ಇದು ಆಗಾಗ ಭೂಕಂಪ ಉಂಟಾಗಲು ಕಾರಣವಾಗುತ್ತದೆ. ಫೆಬ್ರವರಿಯಲ್ಲಿ ನೆರೆಯ ಇಂಡೋನೇಷ್ಯಾದ ಉತ್ತರ ಸುಮಾತ್ರಾದಲ್ಲಿ 6.2 ತೀವ್ರತೆಯ ಭೂಕಂಪ ಉಂಟಾಗಿತ್ತು. ಈ ಭೂಕಂಪದಲ್ಲಿ 12 ಜನರು ಸಾವನ್ನಪ್ಪಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...