Saturday, July 11, 2026
Saturday, July 11, 2026

ಪಿಯು ಪಠ್ಯ ಪರಿಷ್ಕರಣೆ ಮಾಡಿಸುವುದಿಲ್ಲ-ಸಚಿವ ನಾಗೇಶ್

Date:

ಶಾಲಾ ಪಠ್ಯಪುಸ್ತಕರ ಪರಿಷ್ಕರಣೆ ವಿವಾದದ ಬಳಿಕ, ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಇಲ್ಲ. ಈ ಹಿಂದಿನ ಪಠ್ಯಪುಸ್ತಕವೇ ಯಥಾವತ್ತಾಗಿ ಇರಲಿದೆ ಎಂಬುದಾಗಿ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,
ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯದಲ್ಲಿ ಕೆಲ ಅಂಶಗಳ ಬಗ್ಗೆ ಆಕ್ಷೇಪಗಳಿದ್ದವು ಆ ಅಧ್ಯಾಯವನ್ನು ಪರಿಷ್ಕರಿಸುವ ಹೊಣೆಯನ್ನು ರೋಹಿತ್ ಚಕ್ರತೀರ್ಥಗೆ ನೀಡಲಾಗಿತ್ತು. ಆದರೆ ಸಮಿತಿ ಈಗಾಗಲೇ ವಿಸರ್ಜಿಸಲಾಗಿದೆ. ಹೀಗಾಗಿ ಪಿಯು ಪರಿಷ್ಕರಣಾ ಸಮಿತಿಯನ್ನೂ ವಿಸರ್ಜಿಸಿದಂತಾಗಿದೆ. ಅದರ ವರದಿಯನ್ನು ಪಡೆಯುತ್ತಿಲ್ಲ ಎಂದು ತಿಳಿಸಿದ್ದಾರೆ.

ಪಿಯು ಪಠ್ಯಪುಸ್ತಕ ಯಥಾವತ್ತಾಗಿ ಇರಲಿದೆ. ಪರಿಷ್ಕರಣೆ ಮಾಡಲ್ಲ. ಈಗ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜನೆ ಮಾಡಲಾಗಿದೆ. ಅದ್ದರಿಂದ ಈ ಸಮಿತಿಯಿಂದ ಪರಿಷ್ಕರಣೆ ಮಾಡಿಸುವುದಿಲ್ಲ ಎಂದರು.

ಶಾಲಾ ಪಠ್ಯಪುಸ್ತಕ ಕುರಿತಂತೆ ಬರಗೂರು ಸಮಿತಿ ನೀಡಿದ್ದ ಬಸವಣ್ಣ ಪಠ್ಯವನ್ನು ಶಾಲಾ ಪಠ್ಯಗಳಲ್ಲಿ ಮುಂದುವರೆಸಲಾಗುತ್ತದೆ. ಅಂಬೇಡ್ಕರ್ ಪಠ್ಯ ಸೇರಿದಂತೆ ಇತರೆ ಲೋಪಗಳನ್ನು ಸರಿ ಪಡಿಸಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...